ಮೈಸೂರು: ನಾಡದೇವತೆ ಚಾಮುಂಡೇಶ್ವರಿ ತಾಯಿ ನಾಡಿನ ಜನತೆಗೆ ಮತ್ತು ನಾಡಿಗೆ ಒಳ್ಳೆಯದು ಮಾಡಲಿ ಎಂದು ಮುಡಾ ಅಧ್ಯಕ್ಷ ಕೆ. ಮರೀಗೌಡ ತಿಳಿಸಿದರು.
ಮೈಸೂರು ತಾಲ್ಲೂಕು ಕೆ.ಆರ್. ಮಿಲ್ ಕಾಲೋನಿಯಲ್ಲಿ ನಡೆದ ಶ್ರೀ ಚಾಮುಂಡೇಶ್ವರಿ ಉತ್ಸವದಲ್ಲಿ ಭಾಗವಹಿಸಿ ದೇವಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ಸಿದ್ದರಾಮಯ್ಯರವರು ಮುಖ್ಯಮಂತ್ರಿ ಆದರೆ ಕೆ.ಆರ್.ಎಸ್. ತುಂಬುವುದಿಲ್ಲ, ಮಳೆ ಬರುವುದಿಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದರು. ಆದರೆ ಚಾಮುಂಡೇಶ್ವರಿ ದೇವಿಯ ಕೃಪೆಯಿಂದ ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲಾ ಡ್ಯಾಂಗಳು ಭರ್ತಿಯಾಗಿವೆ. ರೈತರು ಸಂತೋಷದಿಂದ ಇದ್ದಾರೆ. ಕಾಂಗ್ರೆಸ್ ಸರ್ಕಾರ ಬಡವರಿಗೆ ನೀಡಿರುವ ಗ್ಯಾರಂಟಿಗಳಿಂದ ಜನರು ನೆಮ್ಮದಿಯಾಗಿದ್ದಾರೆ.
ಇದನ್ನು ಸಹಿಸದ ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ಸರ್ಕಾರವನ್ನು ಅಭದ್ರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇವರ ಆಟ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮುಂದೆ ನಡೆಯುವುದಿಲ್ಲ. ಸಿದ್ದರಾಮಯ್ಯರವರು ಅವರ ೪೦ ವರ್ಷದ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಅಧಿಕಾರ ನಡೆಸಿರುವ ರಾಜ್ಯದ ಏಕೈಕ ಮುಖ್ಯಮಂತ್ರಿಯಾಗಿದ್ದಾರೆ. ಅಹಿಂದ ನಾಯಕ ೨ನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಸಹಿಸದೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ತಾಯಿ ಚಾಮುಂಡಿ ಅವರಿಗೆ ಒಳ್ಳೆಯದು ಮಾಡಲಿ ಎಂದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ಟಿ.ಬಿ. ಚಿಕ್ಕಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ. ಸತೀಶ್‌ಕುಮಾರ್, ಡಿ. ರವಿ ಹಾಗೂ ಗ್ರಾಮಸ್ಥರು ಹಾಜರಿದ್ದರು.