ಶ್ರೀರಂಗಪಟ್ಟಣ : ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಭಾರೀ ಪ್ರಮಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದಿಂದ ೧,೭೦,೦೦೦ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ. ಶ್ರೀರಂಗಪಟ್ಟಣದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.

ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿಯಂಚಿನ ಹಲವು ಪ್ರದೇಶಗಳು ಭಾಗಶಃ ಜಲಾವೃತವಾಗಿದೆ. ಶ್ರೀರಂಗಪಟ್ಟಣ ಕಾವೇರಿ ನದಿಯಿಂದ ಸುತ್ತುವರಿದ ದ್ವೀಪ ಪ್ರದೇಶವಾಗಿರುವ ಕಾರಣ ಅಲ್ಲಿನ ಜನತೆ ಭಯ ಭೀತರಾಗಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು. ಕಾವೇರಿ ನದಿ ಪಾತ್ರಕ್ಕೆ ಅಥವಾ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ರೈತರು ಕೃಷಿ ಚಟುವಟಿಕೆಗಳಿಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಿರಲು ಜಿಲ್ಲಾಡಳಿತ ಸೂಚಿಸಿದೆ.
ನದಿಪಾತ್ರದಲ್ಲಿ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಪಿ ತೆಗೆಯುವುದನ್ನು ಸಹ ಕಡ್ಡಾಯವಾಗಿ ನಿಷೇಧಿಸಲಾಗಿದೆ.