ಬೆಂಗಳೂರು : ರಾಜ್ಯದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಹಿನ್ನೆಲೆಯಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳ್ಳಂಬೆಳಕ್ಕೆ ಎಲ್ಲ ಸಚಿವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್‌ಗೆ ಆಹ್ವಾನಿಸಿದ್ದರು. ಈ ವೇಳೆ ಸಚಿವರೊಂದಿಗೆ ಚರ್ಚೆ ಮಾಡಿ ತಮಗೆ ರಾಜ್ಯಪಾಲರಿಂದ ಕೊಟ್ಟ ನೋಟೀಸ್‌ಗೆ ಉತ್ತರ ನೀಡುವ ಬಗ್ಗೆ ಚರ್ಚೆ ಮಾಡಿದ್ದಾರೆ. ಎಲ್ಲ ಸಚಿವರಿಗೂ ಈ ನೋಟೀಸ್‌ನಲ್ಲಿ ಯಾವುದೇ ಸತ್ಯಾಂಶವಿಲ್ಲ, ತಮ್ಮ ಬೆಂಬಲಕ್ಕೆ ಇಲ್ಲುವಂತೆ ಎಲ್ಲ ಸಚಿವರಿಗೂ ಸಿಎಂ ಮನವರಿಕೆ ಮಾಡಿಕೊಟ್ಟಿದ್ದಾರೆ.
ಹೈಕಮಾಂಡ್ ತಮ್ಮ ನೈತಿಕ ಬೆಂಬಲಕ್ಕೆ ನಿಂತಿದೆ ಎಂಬುದನ್ನು ತಿಳಿಸಿದ್ದಾರೆ. ಇನ್ನು ರಾಜ್ಯಪಾಲರ ನೋಟೀಸ್‌ಗೆ ಕಾನೂನು ಹೋರಾಟ ಮಾಡುವುದೇ ಸೂಕ್ತ ಎಂದು ಸಚಿವರೊಂದಿಗೆ ಚರ್ಚೆ ಮಾಡಿದ್ದಾರೆ. ಈ ವಿಷಯವನ್ನು ಜನರ ಬಳಿಗೂ ಕೊಂಡೊಯ್ಯಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಹೋರಾಟದತ್ತ ರಾಜ್ಯ ಸರ್ಕಾರ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಹೊರಗಿಟ್ಟು ಸಚಿವ ಸಂಪುಟ ಸಭೆ:
ಇದರ ಬೆನ್ನಲ್ಲಿಯೇ ಎಲ್ಲ ಸಚಿವರು ಸಚಿವ ಸಂಪುಟ ಸಭೆಗೆ ಹಾಜರಾಗಲು ತೆರಳಿದರು. ಆದರೆ, ಈ ಸಚಿವ ಸಂಪುಟ ಸಭೆಯಲ್ಲಿ ಮುಡಾ ಪ್ರಾಸಿಕ್ಯೂಷನ್ ನೋಟೀಸ್ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ಸಭೆ ನಡೆಸಲಾಗುತ್ತದೆ. ಅಂದರೆ, ಇಂದಿನ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸುವುದಿಲ್ಲ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟರೆ ಅದು ಕಾನೂನಾತ್ಮಕ ವಾಗಿ ಸರಿ ಅಲ್ಲ. ಹಾಗಾಗಿ ಇದರ ವಿರುದ್ದ ಕಾನೂನು ಹೋರಾಟ ಮಾಡಲು ತೀರ್ಮಾನ ಮಾಡುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುವ ಸಾಧ್ಯತೆಯಿದೆ. ಇದು ಸಿಎಂ ಸಿದ್ದರಾಮಯ್ಯಗೆ ಸಂಬಂಧಿಸಿದ ವಿಚಾರ ಆಗಿರುವುದರಿಂದ ಈ ಸಭೆಯಲ್ಲಿ ಸಿಎಂ ಭಾಗಿ ಆಗಲ್ಲ.