ಪಾಂಡವಪುರ: ಕನ್ನಂಬಾಡಿ ಕಟ್ಟೆಯಿಂದ 1.70ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಸಿರುವ ಪರಿಣಾಮ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.
ಕಾವೇರಿ ನದಿ ಪ್ರವಾಹಕ್ಕೆ ಗ್ರಾಮಕ್ಕೆ ನುಗ್ಗಿದ್ದ ನೀರು. ಸಾರ್ವಜನಿಕರೊಂದಿಗೆ ನೆರೆ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಸಿಇಓ ಶೇಖ್ ತನ್ವೀರ್ ಆಸಿಫ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿ ಅಧಿಕಾರಿಗಳು ಭಾಗಿಯಾಗಿದ್ದರು.
ಡ್ಯಾಂ ನಿಂದ 1.70ಲಕ್ಷ ಕ್ಯೂಸೆಕ್ ನೀರು ಬಿಟ್ಟ ನಂತರ ಪ್ರವಾಹ ಎದುರಾಗಿದೆ. ಗ್ರಾಮಕ್ಕೆ ನೀರು ನುಗ್ಗಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜನರನ್ನ ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಈ ಸಂದರ್ಭದಲ್ಲಿ ಹೇಳಿದರು.