ಮಂಗಳೂರು (ದಕ್ಷಿಣ ಕನ್ನಡ): ರಾಜ್ಯದ ಕಾಂಗ್ರೆಸ್ ಸರಕಾರ ಹಾಗೂ ಮುಖ್ಯಮಂತ್ರಿ ಸಿಎಂ ಸಿದ್ಧರಾಮಯ್ಯ ಅವರ ಮೇಲೆ ವಿನಾ ಕಾರಣ ಆರೋಪ ಮಾಡುವ ಮೂಲಕ ಬಿಜೆಪಿ ಸರಕಾರವನ್ನು ಅಸ್ಥಿರಗೊಳಿಸಲು ಕಸರತ್ತು ನಡೆಸುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆರೋಪಿಸಿದ್ದಾರೆ.
ಮಂಗಳೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷವಾದ ಬಿಜೆಪಿ ತನ್ನ ಜವಾಬ್ದಾರಿ ಮರೆತು ವಿಧಾನಸಭೆ, ವಿಧಾನ ಪರಿಷತ್ ಅಧಿವೇಶನಕ್ಕೆ ಅಡ್ಡಿಪಡಿಸಿತು. ಮುಖ್ಯಮಂತ್ರಿಗೆ ಉತ್ತರಿಸಲು ಅವಕಾಶ ನೀಡಿಲ್ಲ. ರಾಜ್ಯ ಬಿಜೆಪಿಯವರು ಮೈಸೂರಿಗೆ ಪಾದಯಾತ್ರೆ ಮಾಡುವ ಬದಲು ನಿಜವಾಗಿಯೂ ಜನರ ಮೇಲೆ ಕಾಳಜಿಯಿದ್ದರೆ ಜ್ವಲಂತ ಸಮಸ್ಯೆಗಳಾದ ಬೆಲೆಯೇರಿಕೆ, ಕೇಂದ್ರದ ಅನುದಾನ ತಾರತಮ್ಯದ ಬಗ್ಗೆ ದಿಲ್ಲಿಗೆ ಪಾದಯಾತ್ರೆ ತೆರಳಲಿ ಎಂದರು.