ಬೆಂಗಳೂರು : ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರನ್ನು ತನಿಖೆಗೆ ಒಳಪಡಿಸಲು ಪ್ರಾಸಿಕ್ಯೂಷನ್ ನೋಟಿಸ್ ನೀಡಿದ ವಿಚಾರವಾಗಿ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಗೃಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆತುರಾತುರವಾಗಿ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ನಿನ್ನೆ ರಾತ್ರಿ ಸಂಪುಟದ ನಿರ್ಣಯ ಕಳಿಸಲು ತೀರ್ಮಾನಿಸಿದ್ದೆವು. ರಾಜ್ಯದಲ್ಲಿ ರಾಜ್ಯಪಾಲರಿಲ್ಲ ಕಚೇರಿಗೆ ನಿನ್ನೆಯೇ ತಲುಪಿಸಿರಬೇಕು. ರಾಜ್ಯಪಾಲರ ಮೇಲೆ ಒತ್ತಡಗಳು ಬಂದಿವೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ದೂರು ಪಡೆದ ದಿನವೇ ರಾಜ್ಯಪಾಲರು ನೋಟಿಸ್ ಕೊಟ್ಟಿದ್ದಾರೆ ಎಂದರು.
ಜುಲೈ ೨೬ರಂದದು ರಾಜ್ಯಪಾಲರಿಗೆ ಅಬ್ರಹಾಂ ಮನವಿ ಕೊಟ್ಟಿದ್ದು. ರಾಜ್ಯಪಾಲರ ಪ್ರಶ್ನೆಗಳಿಗೆ ಲಿಖಿತ ಮೂಲಕ ಸಿ ಎಸ್ ಅವರಿಂದ ಉತ್ತರ ಕಳುಹಿಸಲಾಗಿದೆ. ಇದಾದ ನಂತರ ರಾಜ್ಯಪಾಲರಿಂದ ಶೋಕಾಸ್ ನೋಟಿಸ್ ಬಂದಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಲ್ಲವೆಂಬ ವಿಶ್ವಾಸವಿದೆ. ಒಂದು ವೇಳೆ ಕೊಟ್ಟರು ಅದನ್ನು ಕಾನೂನು ಪ್ರಕಾರ ಎದುರಿಸುತ್ತೇವೆ. ರಾಜ್ಯಪಾಲರು ಏನೇ ನಿರ್ಧಾರ ಕೈಗೊಂಡರು ನಾವು ಎದುರಿಸುತ್ತೇವೆ.ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.