ಬಳ್ಳಾರಿ : ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಆದರೆ ಜಾತಿ ಅಡ್ಡ ಬಂದ ಕಾರಣಕ್ಕೆ ಮನೆಯವರು ಮದುವೆಗೆ ನಿರಾಕರಿಸಿದರು. ಈ ಹಿನ್ನೆಲೆಯಲ್ಲಿ ಮನನೊಂದು ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ನಡೆದಿದೆ.
ರಾಜು (೨೩) ಹಾಗೂ ಪವಿತ್ರಾ(೨೦) ಮೃತ ದುರ್ಧೈವಿಗಳು. ಮೃತರಿಬ್ಬರೂ ಸಿರಗುಪ್ಪ ಪಟ್ಟಣದ ನಿವಾಸಿಗಳಾಗಿದ್ದು, ಅನ್ಯ ಜಾತಿಯವರಾಗಿದ್ದಕ್ಕೆ ಎರಡೂ ಮನೆಯಲ್ಲಿ ಮದುವೆಗೆ ವಿರೋಧ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ತಡ ರಾತ್ರಿ ಮನೆ ಬಿಟ್ಟು ಹೊರ ಬಂದಿದ್ದಾರೆ. ರಾಜು ಹಾಗೂ ಪವಿತ್ರಾ, ಪೋಷಕರ ವಿರೋಧಕ್ಕೆ ಮನನೊಂದು ಬೆಳಗಿನ ಜಾವ ಜಮೀನೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ಘಟನೆ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಮಗನ ಮೃತ ದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.