ಬೆಂಗಳೂರು: ಬ್ಯಾಟರಾಯನಪುರ ಬಳಿಯ ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ವರ್ಷ ೨೦೨೩ ಆಗಸ್ಟ್ ೧೧ ರಂದು ಬಿಬಿಎಂಪಿ ಮುಖ್ಯ ಕಚೇರಿಯ ಬಿಬಿಎಂಪಿ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ, ಬರೋಬ್ಬರಿ ೯ ಮಂದಿ ಗಾಯಗೊಂಡಿದ್ದರು.
ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ೯ ಮಂದಿಯನ್ನು ಪೊಲೀಸ್ ವಾಹನದಲ್ಲಿಯೇ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.