Monday, April 21, 2025
Google search engine

Homeರಾಜ್ಯಸುದ್ದಿಜಾಲಕೇಂದ್ರ ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳ ಸಮಾನ ಪರಿಗಣನೆ: ಕೇಂದ್ರ ಸಚಿವೆ ಕರಂದ್ಲಾಜೆ

ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳ ಸಮಾನ ಪರಿಗಣನೆ: ಕೇಂದ್ರ ಸಚಿವೆ ಕರಂದ್ಲಾಜೆ

ಮೈಸೂರು: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ಸೇರಿದಂತೆ ದೇಶದ ಎಲ್ಲ ರಾಜ್ಯಗಳನ್ನು ಸಮಾನವಾಗಿ ಪರಿಗಣಿಸಲಾಗಿದೆ. ಕರ್ನಾಟಕಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ ಎಂದು ಕೇಂದ್ರ ಎಂಎಸ್‌ಎಂಇ, ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾಕರಂದ್ಲಾಜೆ ಮೈಸೂರಿನಲ್ಲಿ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ನ್ಯಾಯಾಲಯದಲ್ಲಿರುವ ಕಾರಣ, ಕೇಂದ್ರ ಸರ್ಕಾರ ಈ ಯೋಜನೆಗೆ ಆರ್ಥಿಕ ನೆರವು ನೀಡಲು ಸಾಧ್ಯವಾಗುವುದಿಲ್ಲ ಎಂದರು.

ರಾಜ್ಯದ ಎರಡು ಹಗರಣಗಳ ಬಗ್ಗೆ ರಾಜ್ಯಪಾಲರಿಗೆ ಖಾಸಗಿ ವ್ಯಕ್ತಿಯೊಬ್ಬರು ದೂರು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಕಾನೂನು ಸಲಹೆ ಪಡೆದು, ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಈ ಎರಡೂ ಪ್ರಕರಣಗಳಲ್ಲಿ ಪ್ರಮುಖ ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೋಟಿಸ್ ಅಂಗೀಕರಿಸಿ ರಾಜೀನಾಮೆ ನೀಡಿ, ತನಿಖೆಗೆ ಸಹಕರಿಸಲಿ ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular