ಬೆಂಗಳೂರು : ಯಾದಗಿರಿಯಲ್ಲಿ ಸೈಬರ್ ಕ್ರೈಂ ಠಾಣೆಯ ಪಿಎಸ್‌ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಗೆ ಸೂಚಿಸಿದ್ದೇನೆ. ಈ ಒಂದು ಪ್ರಕರಣದಲ್ಲಿ ಶಾಸಕರಾಗಲಿ ಬೇರೆ ಯಾರೇ ಭಾಗಿಯಾಗಿದ್ದರು, ಕೂಡಲೇ FIR ದಾಖಲಿಸಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಕುರಿತಂತೆ ಈಗಾಗಲೇ ತನಿಖೆಗೆ ಸೂಚನೆ ನೀಡಿದ್ದೇನೆ. ಪಿಎಸ್‌ಐ ನ್ಯಾಚುರಲ್ ಆಗಿ ಮೃತಪಟ್ಟಿದ್ದಾಗಿ ಸುದ್ದಿ ಬರುತ್ತಿದೆ. ಪಿಎಸ್‌ಐ ಸೂಸೈಡ್ ಮಾಡಿಕೊಂಡಿಲ್ಲ, ಡೆತ್ ನೋಟ್ ಬರೆದಿಟ್ಟಿಲ್ಲ. ಅವರನ್ನು ವರ್ಗಾವಣೆ ಮಾಡಿದ್ದಾರೆ ಅನ್ನೋ ಕಾರಣ ಕೊಟ್ಟಿದ್ದಾರೆ.
ಇದನ್ನೆಲ್ಲಾ ತನಿಖೆ ಮಾಡಿ ಅಂತ ನಾನು ಸೂಚನೆ ಕೊಟ್ಟಿದ್ದೇನೆ. ತನಿಖಾ ವರದಿ ಬಂದ ಮೇಲೆ ನೋಡೋಣ. ಪಿಎಸ್‌ಐ ಪರಶುರಾಮ್ ಪತ್ನಿ ಆರೋಪವನ್ನು ಪರಿಗಣಿಸುತ್ತೇನೆ. ಪ್ರಾಥಮಿಕವಾಗಿ ಕೆಲವೊಂದಿಷ್ಟು ಮಾಹಿತಿಯನ್ನು ಕಲೆ ಹಾಕಬೇಕಾಗುತ್ತದೆ. ಪರಿಶೀಲನೆ ಮಾಡಿ ಶ್ರೀಘ್ರದಲ್ಲಿ ಎಫ್‌ಐಆರ್ ದಾಖಲಿಸುತ್ತಾರೆ. ಶಾಸಕರು ಇದ್ದರೂ ಅಥವಾ ಬೇರೆಯವರಿದ್ದರು ಹಾಕುತ್ತಾರೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.