Saturday, April 19, 2025
Google search engine

Homeರಾಜ್ಯಸುದ್ದಿಜಾಲಸ್ವಾತಂತ್ರ್ಯ ದಿನಾಚರಣೆ ಸಂಬಂಧ ತಹಸಿಲ್ದಾರ್ ಸೋಮಶೇಖರ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ

ಸ್ವಾತಂತ್ರ್ಯ ದಿನಾಚರಣೆ ಸಂಬಂಧ ತಹಸಿಲ್ದಾರ್ ಸೋಮಶೇಖರ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ

ಮದ್ದೂರು: ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಸಂಬಂಧ ವಿವಿಧ ಸಂಘ-ಸಂಸ್ಥೆಗಳ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷ ತಹಸಿಲ್ದಾರ್ ಸೋಮಶೇಖರ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.

ಸನ್ಮಾನಿತರನ್ನ ಆಯ್ಕೆ ಮಾಡುವ ಜವಾಬ್ದಾರಿಯನ್ನು ಸಮಿತಿಗೆ ಸಂಪೂರ್ಣ ಜವಾಬ್ದಾರಿ ನೀಡಬೇಕು ಎಂದು ರಾಜ್ಯ ತೆಂಗು ಬೆಳೆಗಾರರ ಸಂಘದ ಲಕ್ಷ್ಮಣ್ ಚನ್ನಸಂದ್ರ ಸಭೆಗೆ ತಿಳಿಸಿದರು.

ಒಂದು ಬಾರಿ ತಾಲೂಕು ಆಡಳಿತದಿಂದ ಸನ್ಮಾನಿಸಿದವರನ್ನು ಮತ್ತೆ ಸನ್ಮಾನಿಸುವ ಕೆಲಸವಾಗಬಾರದು ಹೊಸ ವರ್ಷ ಸಾಧಕರನ್ನು ಗುರುತಿಸಿ ಅವರನ್ನು ಅಭಿನಂದಿಸುವ ಕೆಲಸವಾಗಬೇಕು ಪಥಸಂಚಲನ ಬರುವ ಸ್ಥಳದಲ್ಲಿ ವಾಹನದಟ್ಟನೆಯನ್ನು ನಿಯಂತ್ರಿಸುವಂತೆ ಸಂಬಂಧಪಟ್ಟ ಇಲಾಖೆಗೆ ತಿಳಿಸಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.

ಒಟ್ಟಾರೆ ಅರ್ಥಪೂರ್ಣ ಸ್ವಾತಂತ್ರೋತ್ಸವ ಆಚರಣೆಗೆ ಎಲ್ಲರೂ ಸಹಕಾರ ನೀಡುವಂತೆ ತಹಶೀಲ್ದಾರ್ ಸೋಮಶೇಖರ್ ಮನವಿ ಮಾಡಿದರು.

ಈ ವೇಳೆ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಕಾರ್ಯದರ್ಶಿ ಸಿಎಚ್ ಕಾಳಿರಯ್ಯ, ಪುರಸಭಾ ಮುಖ್ಯ ಅಧಿಕಾರಿ ಮೀನಾಕ್ಷಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಂಘ-ಸಂಸ್ಥೆಯ ಮುಖಂಡರು ಹಾಜರಿದ್ದರು.

RELATED ARTICLES
- Advertisment -
Google search engine

Most Popular