Saturday, April 19, 2025
Google search engine

Homeಅಪರಾಧಕಾನೂನುವಾಲ್ಮೀಕಿ ನಿಗಮದ ಹಗರಣ: ಬಿ.ನಾಗೇಂದ್ರಗೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ

ವಾಲ್ಮೀಕಿ ನಿಗಮದ ಹಗರಣ: ಬಿ.ನಾಗೇಂದ್ರಗೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಒಂದೆಡೆ ಮುಡಾ ಹಗರಣ, ವಾಲ್ಮೀಕಿ ನಿಗಮದಲ್ಲಿ ನಡೆದಿದ್ದಂತ ಕೋಟ್ಯಂತರ ರೂ ಅಕ್ರಮ ಹಣ ವರ್ಗಾವಣೆ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಕೋರ್ಟ್ ಮತ್ತೆ ೧೪ ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ.

ಈ ಕುರಿತಂತೆ ಇಂದು ಸೋಮವಾರ ಬೆಂಗಳೂರಿನ ೮೨ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ನಡೆಸಿತು. ಇಂದು ಬಿ.ನಾಗೇಂದ್ರ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ, ಅವರಿಗೆ ಮತ್ತೆ ೧೪ ದಿನಗಳ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಿ ಆದೇಶಿಸಿದೆ.

ಅಂದಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅವ್ಯವಹಾರ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಅವರನ್ನು ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ಅವರಿಗೆ ಈಗ ಕೋರ್ಟ್ ಮತ್ತೆ ೧೪ ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ.

RELATED ARTICLES
- Advertisment -
Google search engine

Most Popular