ಹುಣಸೂರು : ಕೆಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಹುಣಸೂರು ಪುರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಪೀರ್(೭೫) ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ.
ನಗರದ ಲಾಲ್‌ಬಂದ್ ಮೊಹಲ್ಲಾ ವಾರ್ಡಿನಿಂದ ಪುರಸಭೆ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಎರಡು ಬಾರಿ ಸ್ಪರ್ದಿಸಿದ್ದರು. ಹಾಗೂ ಜೆಡಿಎಸ್ ನಗರಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಮೃತರು ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಶಬ್ಬೀರ್ ನಗರದ ಮಸೀದಿಯಲ್ಲಿ ನಮಾe಼ ಎ ಜ಼ನಾಝಾ ಬಳಿಕ ಸೋಮವಾರ ಸಂಜೆ ಅಂತ್ಯಕ್ರಿಯೆ ನಡೆಯಿತು. ಮೃತರ ನಿಧನಕ್ಕೆ ವಿವಿಧ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.