Saturday, April 19, 2025
Google search engine

Homeಅಪರಾಧಮದ್ಯದ ಅಮಲಿನಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೆ ಯತ್ನಿಸಿದ ಮಗ

ಮದ್ಯದ ಅಮಲಿನಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೆ ಯತ್ನಿಸಿದ ಮಗ

ಗುಡಿಬಂಡೆ: ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಭಾನುವಾರ(ಆಗಸ್ಟ್ 4) ರಾತ್ರಿ ಮದ್ಯದ ಅಮಲಿನಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಅವರನ್ನು ಮನೆ ಹಿಂಭಾಗದ ತಿಪ್ಪೆಗುಂಡಿಗೆ ಎಸೆದು ಪರಾರಿ ಆಗಿದ್ದಾನೆ.

ನೆರೆಹೊರೆಯವರು ಈ ವಿಚಾರವನ್ನು ಪೊಲೀಸರಿಗೆ ತಲುಪಿಸಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆರೋಪಿಗೆ ವಿವಾಹವಾಗಿದ್ದು ಆತನ ಪತ್ನಿ ದೂರವಿದ್ದಾಳೆ ಎನ್ನಲಾಗುತ್ತಿದೆ. ಈತ ತಂದೆ ತಾಯಿಯ ಜೊತೆ ವಾಸಿಸುತ್ತಿದ್ದ. ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಸೋಮವಾರ ರಾತ್ರಿ ಗುಡಿಬಂಡೆ ಠಾಣೆಗೆ ಡಿವೈಎಸ್‌ಪಿ ಶಿವಕುಮಾರ್ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದರು. ಆಸ್ಪತ್ರೆಗೂ ಭೇಟಿ ನೀಡಿ ಆರೋಪಿಯ ತಂದೆಯಿಂದ ಮಾಹಿತಿ ಕಲೆ ಹಾಕಿದ್ದಾರೆ.

ಗುಡಿಬಂಡೆ ಪೊಲೀಸರು ಆರೋಪಿಯನ್ನು ಬಂದಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular