Saturday, April 19, 2025
Google search engine

Homeರಾಜಕೀಯರಾಜ್ಯ ಸರ್ಕಾರ ರಕ್ಷಣೆ ಮಾಡುವವರನ್ನೇ ಭಕ್ಷಕರನ್ನಾಗಿ ಮಾಡಿದೆ: ಭಾಸ್ಕರ್ ರಾವ್ ಆರೋಪ

ರಾಜ್ಯ ಸರ್ಕಾರ ರಕ್ಷಣೆ ಮಾಡುವವರನ್ನೇ ಭಕ್ಷಕರನ್ನಾಗಿ ಮಾಡಿದೆ: ಭಾಸ್ಕರ್ ರಾವ್ ಆರೋಪ

ಚಿತ್ರದುರ್ಗ: ರಾಜ್ಯ ಸರ್ಕಾರ ರಕ್ಷಣೆ ಮಾಡುವವರನ್ನೇ ಭಕ್ಷಕರನ್ನಾಗಿ ಮಾಡಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆರೋಪಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಪೊಲೀಸರನ್ನೇ ಈ ಸರ್ಕಾರ ಭಕ್ಷಕರನ್ನಾಗಿ ಮಾಡಿದೆ. ಲಕ್ಷಾಂತರ ರೂ. ಕೊಡುವವರೆಗೆ ಪೋಸ್ಟಿಂಗ್ ಕೊಡುವುದಿಲ್ಲ. ಸಮವಸ್ತ್ರಧಾರಿಗಳು ಭಕ್ಷಕರು ಮಾತ್ರವಲ್ಲ ಭಿಕಾರಿಗಳಾಗಿದ್ದಾರೆ. ಇದು ನೇರವಾಗಿ ಜನರ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಬೇರೆ ಇಲಾಖೆಗಳಲ್ಲಿ ಗುತ್ತಿಗೆ, ಟೆಂಡರ್, ಪರ್ಸೆಂಟೇಜ್ ನಡೆಯುತ್ತದೆ. ಆದರೆ, ಪೊಲೀಸರು ಜನಸಾಮಾನ್ಯರಿಂದ ವಸೂಲಿ ಮಾಡಬೇಕಾಗುತ್ತದೆ. ಲೂಟಿ ಹೊಡೆಯಿರಿ ಎಂದು ಸರ್ಕಾರವೇ ಒತ್ತಡ ಹೇರುತ್ತಿದೆ. ಇದರಿಂದಾಗಿ ಪೊಲೀಸ್ ಇಲಾಖೆ ಸಂಪೂರ್ಣ ದುರ್ಬಲವಾಗುತ್ತಿದೆ. ಪೊಲೀಸರಿಗೇ ರಕ್ಷಣೆ ಕೊಡಬೇಕಾದ ಸ್ಥಿತಿ ನಿರ್ಮಾಣ ಆಗಿದೆ ಎಂದು ಅವರು ಹೇಳಿದರು.

ಪಿಎಸ್​ಐ ಪರಶುರಾಮ್ ಆತ್ಮಹತ್ಯೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಾಮಾಣಿಕತೆ ಇರುವುದರಿಂದಲೇ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಬೆಂಗಳೂರಲ್ಲಿ ಪೊಲೀಸ್ ಠಾಣೆಗೆ ಪೋಸ್ಟಿಂಗ್ ಪಡೆಯಲು ಕೋಟಿಗಟ್ಟಲೆ ರೂಪಾಯಿ ಹಣ ಕೊಡಬೇಕು. ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ಹಣ ಕೊಡಬೇಕಿದೆ. ಜನಪ್ರತಿನಿಧಿಗಳು, ಗೃಹ ಸಚಿವರು, ಮುಖ್ಯಮಂತ್ರಿಗೆ ಹಣ ಕೊಡಬೇಕು. ಪ್ರಬಲ ಮುಖ್ಯಮಂತ್ರಿ ಇದ್ದರೆ ಈ ರೀತಿ ಆಗುವುದಿಲ್ಲ. ದುರ್ಬಲ ಮುಖ್ಯಮಂತ್ರಿ ಇದ್ದಾಗ ಹೀಗೆಲ್ಲ ಆಗುತ್ತದೆ. ಶಾಸಕರಿಗೆಲ್ಲ ತೋಳಗಳಂತೆ ಹಣ ಕೀಳಲು ಬಿಟ್ಟಿದ್ದಾರೆ ಎಂದು ಭಾಸ್ಕರ್ ರಾವ್ ಆರೋಪಿಸಿದ್ದಾರೆ.

RELATED ARTICLES
- Advertisment -
Google search engine

Most Popular