ಮೈಸೂರು: ಪಿಎಸ್ ಐ ಪರಶುರಾಮ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸರಕಾರ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರನನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕಿತ್ತು ಇದುವರೆಗೂ ಏಕೆ ಬಂಧಿಸಿಲ್ಲ ಎಂದು ಮಾಜಿ ಸಚಿವ ಹಾಗು ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ.ಮಹೇಶ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಗಾವಣೆ ಆದ ಏಳು ದಿನಗಳಲ್ಲೇ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗು ಅವರ ಪುತ್ರನ ಕಿರುಕುಳದಿಂದ ಬೇಸತ್ತು ಪೊಲೀಸ್ ಅಧಿಕಾರಿ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೃಹ ಸಚಿವರೊಬ್ಬರು ಪ್ರಾಮಾಣಿಕರಾಗಿದ್ದರೇ ಮಾತ್ರ ಸಾಲುವುದಿಲ್ಲ. ಅವರ ಸುತ್ತಲೂ ಇರುವಂತಹ ಪ್ರಾಮಾಣಿಕರಾಗಿರಬೇಕು. ಈ ಹಿಂದೆ ಯಾವುದೇ ಸರ್ಕಾರ ಪೊಲೀಸ್ ಇಲಾಖೆಯನ್ನು ಇಷ್ಟೊಂದು ಕೀಳು ಮಟ್ಟದಲ್ಲಿ ನಡೆಸಿಕೊಂಡಿರಲಿಲ್ಲ. ಈ ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.