ಕೆ.ಆರ್.ನಗರ: ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಕೃಷ್ಣಪ್ಪರವರನ್ನು ಕೇಶಾಲಂಕಾರಿಗಳ ಸಂಘದ ವತಿಯಿಂದ ಬುಧವಾರ ಬಿಇಒ ಕಛೇರಿಯಲ್ಲಿ ಅಭಿನಂದಿಸಲಾಯಿತು. ಈ ವೇಳೆ ಅಧ್ಯಕ್ಷ ಎಂ.ಎಸ್.ರಾಜೇಶ್ ಮಾತನಾಡಿ ಇದೇ ಪ್ರಥಮ ಬಾರಿಗೆ ಕೆ.ಆರ್.ನಗರಕ್ಕೆ ಸವಿತಾ ಸಮಾಜದ ಬಿಇಒ ಆಗಿ ವರ್ಗಾವಣೆ ಮಾಡಿರುವುದಕ್ಕೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಹಿಂದುಳಿದ ಸಮಾಜಗಳಿಗೆ ರಾಜಕೀಯ ಅಧಿಕಾರ ಸಿಗುವುದರ ಜತೆಗೆ ತಾಲೂಕು ಮಟ್ಟದ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದಾರೆ ಶಾಸಕ ಡಿ.ರವಿಶಂಕರ್‌ರವರು ನಮ್ಮ ಸಮಾಜದವರನ್ನು ಗುರುತಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನಾಗಿ ವರ್ಗಾವಣೆ ಮಾಡಿಸಿದ್ದಾರೆ ಅದಕ್ಕಾಗಿ ಶಾಸಕರಿಗೆ ಸಮಾಜದ ವತಿಯಿಂದ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪರವರು ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಶ್ರಮಿಸುವುದರ ಜತೆಗೆ ಸರ್ಕಾರಿ ಶಾಲೆಗಳಿಗೆ ಹೊಸ ಸ್ಪರ್ಶ ನೀಡಿ ಮಕ್ಕಳ ದಾಖಲಾತಿ ಹೆಚ್ಚಿಸಲು ಪ್ರಯತ್ನ ಮಾಡಬೇಕು ಇದರ ಜತೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಗಣನೀಯ ಸಾಧನೆ ಮಾಡಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.
ಬಿಇಒ ಕೃಷ್ಣಪ್ಪ ಮಾತನಾಡಿ ಶಾಸಕರ ಮಾರ್ಗದರ್ಶನದಲ್ಲಿ ಶೈಕ್ಷಣಿಕ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕೇಶಾಲಂಕಾರಿಗಳ ಸಂಘದ ಪದಾಧಿಕಾರಿಗಳಾದ ಕುಮಾರ್, ಭಾಸ್ಕರ್, ಹಂಪಾಪುರಸ್ವಾಮಿ, ಮಂಜುನಾಥ್, ಸಿದ್ದರಾಜು, ಸುಧಾಕರ, ಕುಚೇಲ, ಕುಮಾರ, ಸವಿತಾ ಸಮಾಜದ ಮುಖಂಡರಾದ ವ್ಯಾನ್‌ಸುರೇಶ್, ಸಾಗರ್ ಮತ್ತು ಬಿಇಒ ಕಛೇರಿಯ ಸಿಬ್ಬಂದಿಗಳು ಹಾಜರಿದ್ದರು.