ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇದೇ ಆಗಸ್ಟ್ ಮಾಹೆಯ ೧೯ರಂದು ನುಲಿಯ ಚಂದಯ್ಯ ಜಯಂತಿ, ಆ. ೨೦ ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ, ಆ. ೨೬ರಂದು ಶ್ರೀ ಕೃಷ್ಣ ಜಯಂತಿಗಳನ್ನು ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಮೂರು ಜಯಂತಿ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಚರಿಸುವಂತೆ ಹಾಗೂ ಕಾರ್ಯಕ್ರಮಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು. ಆ. ೨೦ರಂದು ಶ್ರೀ ಕೃಷ್ಣ ಜಯಂತಿಯಂದು ವಿವಿಧ ಕಲಾತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ಆಯೋಜಿಸುವಂತೆ ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಬಾಬು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.