ಬೆಂಗಳೂರು : ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.
ರಾಜಭವನಕ್ಕೆ ಖುದ್ದು ಭೇಟಿ ನೀಡಿದ ಡಾ.ಶಾಲಿನಿ ರಜನೀಶ್ ಅವರು, ರಾಜ್ಯಪಾಲರ ಥಾವರ್ ಚಂದ್ ಅವರಿಗೆ ಪುಷ್ಪಗುಚ್ಚ ನೀಡಿ, ರಾಜ್ಯದ ಪರಿಸ್ಥಿತಿ ಹಾಗೂ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದರು ಎಂದು ಗೊತ್ತಾಗಿದೆ.