ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ದೋಸ್ತಿಗಳ ಪಾದಯಾತ್ರೆ ಮಂಡ್ಯ ಜಿಲ್ಲೆಯನ್ನು ತಲುಪಿತು ೫ ನೆ ದಿನದ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಮ್ಮ ಹೋರಾಟದ ಪರಿಣಾಮ ಆಡಳಿತ ಪಕ್ಷಕ್ಕೆ ನಡುಕ ಉಂಟಾಗಿದೆ. ಸಿದ್ದರಾಮಯ್ಯನವರಿಗೆ ಇವತ್ತು ನಿದ್ರೆ ಬರುತ್ತಿಲ್ಲ ಎಂದರು.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿ ಸಂಕಷ್ಟಕ್ಕೆ ಈಡಾಗಿದ್ದಾರೆ. ಹಾಗಾಗಿ ಅವರಿಗೆ ಸರಿಯಾಗಿ ನಿದ್ರೆ ಬರುತ್ತಿಲ್ಲ. ಅಧಿಕೃತ ಕಾರ್ಯಕ್ರಮಗಳೆಲ್ಲವೂ ಕೂಡ ರದ್ದು ಮಾಡುತ್ತಿರುವುದನ್ನು ನಾವು ನೋಡುತ್ತಿದ್ದೇವೆ ಎಂದರು.
ಎಸ್‌ಎಮ್ ಕೃಷ್ಣ ಬಿಎಸ್ ಯಡಿಯೂರಪ್ಪ ಅವರಿಗೆ ಜನ್ಮ ಕೊಟ್ಟಿರುವಂತಹ ಪುಣ್ಯಭೂಮಿ ಮಂಡ್ಯ. ಎಸ್‌ಐಟಿ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಇದ್ದಂಗೆ.ಭ್ರಷ್ಟ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವವರಿಗೆ ಹೋರಾಟ ನಿಲ್ಲುವುದಿಲ್ಲ. ಪೊಲೀಸ್ ಅಧಿಕಾರಿಗಳ ಮೇಲೆ ವಿಶ್ವಾಸವಿದೆ ಆದರೆ ಆಡಳಿತ ಪಕ್ಷ ಕಾಂಗ್ರೆಸ್ ಮೇಲೆ ನಂಬಿಕೆ ಇಲ್ಲ ಎಂದರು.
ಡಿಕೆ ಶಿವಕುಮಾರ್ ಬಿಚ್ಚಿಡುವಂತಹ ಅವಶ್ಯಕತೆ ಇಲ್ಲ. ಇವರ ಯೋಗ್ಯತೆಗೆ ಸದನದಲ್ಲಿ ಉತ್ತರ ಕೊಡಕ್ಕೆ ಆಗುವುದಿಲ್ಲ. ಸದನದಲ್ಲಿ ಉತ್ತರ ಕೊಡದವರು ಇಲ್ಲಿ ಬಂದು ಪುಕ್ಸಟ್ಟೆ ಮಾತನಾಡುತ್ತಾರೆ. ನಾವ್ಯಾರು ಇವರಿಗೆ ಕಿಮ್ಮತ್ತು ಕೊಡುವ ಅವಶ್ಯಕತೆ ಇಲ್ಲ. ಐದನೇ ದಿನದಲ್ಲಿ ಪಾದಯಾತ್ರೆಯಲ್ಲಿದ್ದರೂ ಸಹ ಕಾರ್ಯಕರ್ತರಲ್ಲಿ ಮುಖದಲ್ಲಿ ಉತ್ಸಾಹ ಕಡಿಮೆಯಾಗಿಲ್ಲ ಎಂದರು.