ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಬೀದಿಬದಿ ವ್ಯಾಪಾರ ನಡೆಸುವವರ ಮೇಲೆ ಮಂಗಳೂರು ಮಹಾನಗರ ಪಾಲಿಕೆ ನಡೆಸುತ್ತಿರುವ ಟೈಗರ್ ಕಾರ್ಯಾಚರಣೆ ವಿರೋಧಿಸಿ ಇಂದು ಬೀದಿಬದಿ ವ್ಯಾಪಾರಿಗಳು ಬೀದಿಗಿಳಿದು ಹೋರಾಟ ನಡೆಸಿದರು.
ಮಂಗಳೂರಿನ ಪಿವಿಎಸ್ ನ ಬಿಜೆಪಿ ಕಚೇರಿಯಿಂದ ನಗರದ ಮನಪಾ ಕಚೇರಿವರಗೆ ಬೃಹತ್ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬೀದಿಬದಿ ವ್ಯಾಪಾರಿಗಳಿಗೆ ನಗರದ ಸಮಾನ ಮನಸ್ಕ ಸಂಘಟನೆಗಳ ಪ್ರಮುಖರು ಮೆರವಣಿಗೆ ಹಾಗೂ ಪ್ರತಿಭಟನೆಗೆ ಸಾಥ್ ನೀಡಿದರು. ಮಂಗಳೂರು ನಗರದ ಪಾಲಿಕೆ ಕಚೇರಿ ಎದುರು ನೂರಾರು ಸಂಖ್ಯೆಯಲ್ಲಿ ಪೋಲಿಸರು ಉಪಸ್ಥಿತರಿದ್ದು, ಬ್ಯಾರಿಕೇಡ್ ಗಳನ್ನು ಅಳವಡಿಸಿ ಪ್ರತಿಭಟನಾಕಾರರ ಪಾಲಿಕೆಗೆ ಮುತ್ತಿಗೆ ಯತ್ನವನ್ನು ತಡೆದರು.