ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಇಂದಿನ ದಾಳಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರದ ವಿವಿಧ ಗ್ರಾಮ ಪಂಚಾಯ್ತಿಗಳ ಮೇಲೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಅಣ್ಣೇಶ್ವರ, ಜಾಲಿಗೆ, ಮಜರಾ ಹೊಸಹಳ್ಳಿ, ಬೂದಿಹಾಳ, ಸೋಂಪುರ, ನಂದಗುಡಿ, ಸೂಲಿಬೆಲೆ ಗ್ರಾಮ ಪಂಚಾಯ್ತಿಗಳು ಸೇರಿದಂತೆ ವಿವಿಧ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಈ ಬಗ್ಗೆ ದೇವನಹಳ್ಳಿಯಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಮಾಹಿತಿ ನೀಡಿದ್ದು, ಇ-ಖಾತಾ ಸೇರಿದಂತೆ ಹಲವು ಅಕ್ರಮಗಳ ಸಂಬಂಧ ಗ್ರಾಮ ಪಂಚಾಯ್ತಿಗಳ ಮೇಲೆ ದಾಳಿಯನ್ನು ನಡೆಸಲಾಗಿದೆ ಅಂತ ತಿಳಿಸಿದ್ದಾರೆ.