Sunday, April 20, 2025
Google search engine

Homeಅಪರಾಧಮನೆಯಲ್ಲಿ ಮದುವೆಗೆ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ

ಮನೆಯಲ್ಲಿ ಮದುವೆಗೆ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ

ಬಾಗಲಕೋಟೆ: ಮನೆಯಲ್ಲಿ ತಮ್ಮ ಮದುವೆ ಒಪ್ಪಲಿಲ್ಲವೆಂದು ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ನಡೆದಿದೆ.

ಸಚಿನ್ ದಳವಾಯಿ(೨೨), ಪ್ರಿಯಾ ಮಡಿವಾಳರ(೧೯) ಮೃತರು. ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಚಿನ್ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಇಬ್ಬರದ್ದು ಬೇರೆ ಬೇರೆ ಜಾತಿಯಾಗಿದ್ದರಿಂದ ಸಚಿನ್ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್, ತಮ್ಮ ಪ್ರೇಯಸಿ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular