Saturday, April 19, 2025
Google search engine

Homeಅಪರಾಧಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ - 12 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 12 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಬೀದರ್: ನಗರದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಳ್ಳತನವಾಗಿದ್ದ 12 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಭಾಲ್ಕಿ, ಮೇಹಕರ್ ಮತ್ತು ಹುಮ್ನಾಬಾದ್ ಪೊಲೀಸ್ ಠಾಣೆಗಳಲ್ಲಿ ಕಳ್ಳತನದ ವಿವಿಧ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು 11 ಕಳ್ಳತನದ ಪ್ರಕರಣಗಳನ್ನು ಭೇದಿಸಿ ಬಂಗಾರ, ಬೆಳ್ಳಿ , ದ್ವಿಚಕ್ರ ವಾಹನ ಹಾಗೂ ಎಮ್ಮೆ ಸೇರಿದಂತೆ 12 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂದಿರ ಕಳ್ಳತನ ಪ್ರಕರಣದಲ್ಲಿ 11 ಗ್ರಾಂ ಬೆಳ್ಳಿ ಮತ್ತು 1 ಗ್ರಾಂ ಚಿನ್ನಾಭರಣ ಹಾಗೂ ತೆಲಂಗಾಣದಲ್ಲಿ ಕಳ್ಳತನವಾಗಿದ್ದ 10 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಎಮ್ಮೆ ಕಳ್ಳತನ ಪ್ರಕರಣ ಭೇದಿಸಿದ ಮೇಹಕರ್ ಠಾಣೆಯ ಪೊಲೀಸರು ಸೂಮಾರು 7 ಲಕ್ಷ ರೂ. ಬೆಲೆಬಾಳುವ ಎಮ್ಮೆ ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular