Sunday, April 20, 2025
Google search engine

Homeರಾಜ್ಯಸುದ್ದಿಜಾಲತುಂಗಭದ್ರಾ ಸಾಫ್ಟ್ ಲಾಕ್ ಅಳವಡಿಕೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲಹೆ

ತುಂಗಭದ್ರಾ ಸಾಫ್ಟ್ ಲಾಕ್ ಅಳವಡಿಕೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲಹೆ

ಮಂಡ್ಯ: ತುಂಗಭದ್ರಾ ಜಲಾಶಯದ ೧೯ನೇ ಕ್ರೆಸ್ಟ್ ಗೇಟ್ ಮುರಿದು ಹೋಗಿದೆ. ಇದರಿಂದ ಆತಂಕಕ್ಕೆ ಕಾರಣವಾಗಿದ್ದು, ಗೇಟ್ ರಿಪೇರಿಗೆ ಜಲಾಶಯದಲ್ಲಿ ಭರ್ತಿಯಾಗಿರುವ ನೀರಿನ ಪೈಕಿ ೫೦ರಿಂದ ೬೦ ಟಿಎಂಸಿ ನೀರು ಖಾಲಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಮುಂದಿನ ಬೆಳೆಗೆ ನೀರಿನ ಕೊರೆತೆ ಎದುರಾಗಲಿದೆ ಎಂದು ರೈತರು ಆತಂಕಗೊಂಡಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಸಾಫ್ಟ್ ಲಾಕ್ ಗೇಟ್ ಅಳವಡಿಸದ ಹಿನ್ನೆಲೆ ಈ ಅವಘಡ ಆಗಿದೆ. ಸುಮಾರು ೭೦ ವರ್ಷಗಳ ಹಿಂದೆ ಟಿಬಿ ಡ್ಯಾಂ ನಿರ್ಮಾಣವಾಗಿದೆ. ಆದರೆ ಡ್ಯಾಂಗೆ ಸಾಫ್ಟ್ ಲಾಕ್ ಗೇಟ್ ಅಳವಡಿಸಿದ ಹಿನ್ನೆಲೆಯಲ್ಲಿ ಹೀಗೆ ಆಗಿದೆ ಎಂದರು.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಸುಮಾರು ೭೦ ವರ್ಷಗಳ ಹಿಂದೆ ಟಿಬಿ ಡ್ಯಾಂ ನಿರ್ಮಾಣವಾಗಿದೆ. ಆದರೆ ಡ್ಯಾಂಗೆ ಸಾಫ್ಟ್‌ಲಾಕ್ ಗೇಟ್ ಅಳವಡಿಸಿದ ಹಿನ್ನೆಲೆ ಹೀಗೆ ಆಗಿದೆ. ಆಲಮಟ್ಟಿ, ನಾರಾಯಣಪುರ ಡ್ಯಾಂಗೆ ಸಾಫ್ಟ್ ಲಾಕ್ ಗೇಟ್ ಅಳವಡಿಕೆ. ಅದೇ ರೀತಿ ಟಿಬಿ(ತುಂಗಾಭದ್ರ) ಡ್ಯಾಂಗೆ ಸಾಫ್ಟ್ ಲಾಕ್ ಗೇಟ್ ಅಳವಡಿಸಬೇಕು. ಇದರಿಂದ ಮುಂದೆ ಇಂತಹ ಅವಘಡಗಳನ್ನು ತಡೆಯಲು ಸಾಧ್ಯವಾಗುತ್ತೆ ಎಂದು ಸಲಹೆ ನೀಡಿದರು.

ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ಅನಾಹುತವಾಗಿದೆ. ೧೯ ಕ್ರಸ್ಟ್ ಗೇಟ್ ಓಪನ್ ಆಗಿದೆ, ೩೦ ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಈ ಅನಾಹುತದಿಂದ ಜಲಾಶಯದ ೬೦ ಟಿಎಂಸಿ ನೀರು ಖಾಲಿಯಾಗುತ್ತೆ. ಇದು ರೈತರ ಬದುಕಿನ ಆಶಾಭಾವನೆಗೆ ಧಕ್ಕೆ ತಂದಿದೆ. ೭೦ ವರ್ಷಗಳ ಹಿಂದೆ ಈ ಜಲಾಶಯ ಕಟ್ಟಿದ್ದಾರೆ. ಹಿಂದೆಯೂ ಅಲ್ಲಿ ಅನೇಕ ಸಮಸ್ಯೆಗಳು ಬೆಳಕಿಗೆ ಬಂದಿದ್ದವು.

ನಾರಾಯಣಪುರ, ಆಲಮಟ್ಟಿ ಡ್ಯಾಂನಲ್ಲಿ ಸ್ಟಾಫ್ ಲಾಕ್ ಗೇಟ್ ಅಳವಡಿಸಲಾಗಿದೆ. ತುಂಗಭದ್ರಾ ಡ್ಯಾಂನಲ್ಲಿ ಸ್ಟಾಫ್ ಗೇಟ್ ಅಳವಡಿಕೆ ಮಾಡಿಲ್ಲ. ಅದಕ್ಕಾಗಿ ನೀರು ನಿಲ್ಲಿಸಲು ಸಾಧ್ಯವಾಗಿಲ್ಲ. ಇದರಿಂದ ರೈತರ ವಿಚಾರದಲ್ಲಿ ಚಲ್ಲಾಡವಾಡಿದ ಆಗೆ ಆಗಿದೆ. ಟಿಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಚಾರದ ವರದಿ ಕೊಟ್ಟಿವೆ. ಅದಕ್ಕಾಗಿ ಇಂತಹ ಪರಿಸ್ಥಿತಿ ಬಂದಿದೆ. ಇದನ್ನು ಸರಿ ಪಡಿಸಿಕೊಳ್ಳಬೇಕಾಗಿದೆ. ಕೆಆರ್‌ಎಸ್ ಡ್ಯಾಂ ವಿಚಾರದಲ್ಲಿ ಎಚ್ಚೆತ್ತುಕೊಳ್ಳುವುದು ಒಳ್ಳೆಯದ್ದು ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular