ಚಿತ್ರದುರ್ಗ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಮಂಜುನಾಥ(೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಂಜುನಾಥ್ ಕಳೆದ ಎರಡು ವರ್ಷಗಳ ಹಿಂದೆ ಚೇತನ ಜೊತೆ ವಿವಾಹವಾಗಿದ್ದರು. ಕೌಟುಂಬಿಕ ಕಲಹದ ಹಿನ್ನಲೆ ಮಂಜುನಾಥ್‌ಗೆ ಪತ್ನಿ ಚೇತನ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಪತ್ನಿ ಚೇತನಾ ವಿರುದ್ದ ಮಂಜುನಾಥ್ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಚೇತನ ಪತಿ ಮುಂಜುನಾಥ್ ವಿರುದ್ದ ಮಹಿಳಾ ಠಾಣೆಗೆ ಹೋಗಿ ದೂರು ನೀಡಿದ್ದಾಳೆ. ಪತ್ನಿ ದೂರು ನೀಡದ ವಿಷಯ ತಿಳಿದು ಮನೆಯಲ್ಲಿ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುನಾಥ್ ಜಿಲ್ಲಾಸ್ಪತ್ರೆ ಅಖಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆದರೀಗ ಕೌಟುಂಬಿಕ ಕಲಹದ ಹಿನ್ನಲೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.