ಬೆಂಗಳೂರು: ಚನ್ನಪಟ್ಟಣ ಟಿಕೆಟ್ ನನಗೆ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಯೋಗೇಶ್ವರ್ ಹೇಳಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಉಪಚುನಾವಣೆಗೆ ಸಂಬಂಧಿಸಿದಂತೆ ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ. ಏನೇನು ರಾಜಕೀಯ ತಿರುವು ಪಡೆಯುತ್ತದೆ ಕಾದುನೋಡಬೇಕು ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ನಡುವಿನ ಭಿನ್ನಾಭಿಪ್ರಾಯದ ಕುರಿತಾಗಿ ಪ್ರಶ್ನಿಸಿದ್ದಕ್ಕೆ ಉತ್ತರಿಸಿದ ಅವರು, ನನಗೂ ಹೆಚ್‌ಡಿಕೆಗೂ ಮಧ್ಯೆ ಭಿನ್ನಾಭಿಪ್ರಾಯ ಏನಿದೆ ಬಿರುಕು ಮೂಡಿಸುವ ಪ್ರಯತ್ನ ಡಿಕೆಶಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಒಪ್ಪದಿದ್ದರೆ ಆಮೇಲೆ ನೋಡೋಣ ಎಂದು ಹೇಳಿದರು.