Friday, April 18, 2025
Google search engine

Homeರಾಜ್ಯಲೋಪದ ಸಂಪೂರ್ಣ ಜವಾಬ್ದಾರಿ ರಾಜ್ಯ ಸರ್ಕಾರ ಹೊತ್ತುಕೊಂಡು, ರೈತರಿಗೆ ಆದ ಅನ್ಯಾಯ ಸರಿಪಡಿಸಿ: ವಿಜಯೇಂದ್ರ ಒತ್ತಾಯ

ಲೋಪದ ಸಂಪೂರ್ಣ ಜವಾಬ್ದಾರಿ ರಾಜ್ಯ ಸರ್ಕಾರ ಹೊತ್ತುಕೊಂಡು, ರೈತರಿಗೆ ಆದ ಅನ್ಯಾಯ ಸರಿಪಡಿಸಿ: ವಿಜಯೇಂದ್ರ ಒತ್ತಾಯ

  • ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ ಪ್ರದೇಶಕ್ಕೆ ₹ 50 ಸಾವಿರ ಪರಿಹಾರ ನೀಡಬೇಕು.
  • ಸಂಪೂರ್ಣ ಜವಾಬ್ದಾರಿ ರಾಜ್ಯ ಸರ್ಕಾರವೇ ಹೊತ್ತುಕೊಳ್ಳಬೇಕು.
  • ರೈತರಿಗೆ ಆದ ಅನ್ಯಾಯ ಸರಿಪಡಿಸಬೇಕು .

ಮುನಿರಾಬಾದ್ (ಕೊಪ್ಪಳ ಜಿಲ್ಲೆ): ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಮುರಿದು ಅಪಾರ ಪ್ರಮಾಣದ ನೀರು ಪೋಲಾಗಿದ್ದು, ಇದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗಿದೆ. ಇದಕ್ಕೆ ಪರಿಹಾರವಾಗಿ ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ ಪ್ರದೇಶಕ್ಕೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

ಸೋಮವಾರ ಕೊಚ್ಚಿ‌ ಹೋದ ಗೇಟ್ ಸ್ಥಳ ಪರಿಶೀಲಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಜಲಾಶಯದಲ್ಲಿ ಆದ ಲೋಪದ ಸಂಪೂರ್ಣ ಜವಾಬ್ದಾರಿ ರಾಜ್ಯ ಸರ್ಕಾರವೇ ಹೊತ್ತುಕೊಳ್ಳಬೇಕು. ರೈತರಿಗೆ ಆದ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಮಳೆ ಕೊರತೆಯಿಂದ ಕಳೆದ ವರ್ಷ ಬರಗಾಲ ಕಾಡಿತ್ತು. ಈ ವರ್ಷ ಉತ್ತಮ ಮಳೆಯಾಗಿ ಜಲಾಶಯ ತುಂಬಿದ್ದರೂ ಆ ನೀರು ಉಳಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಈಗ ತನ್ನ ಹೊಣೆಗಾರಿಕೆ ತಪ್ಪಿಸಿಕೊಳ್ಳಲು ಯಾವ ಅಧಿಕಾರಿಗಳನ್ನು ಟೀಕಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ‌ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಯಾರನ್ನೂ ಟೀಕಿಸದೇ ಹೊಣೆಗಾರಿಕೆಯನ್ನು ಇಲಾಖೆಯ ಸಚಿವರೇ ಹೊತ್ತುಕೊಳ್ಳಬೇಕು ಎಂದರು.

ವಿಪಕ್ಷ ನಾಯಕ ಆರ್.‌ಅಶೋಕ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಲಪ್ಪ ಆಚಾರ್, ಮಾಜಿ ಶಾಸಕ ಬಸವರಾಜ ದಢೇಸೂಗೂರು ಹಾಗೂ ಬಿಜೆಪಿ ಕೊಪ್ಪಳ ‌ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ ಇದ್ದರು.

RELATED ARTICLES
- Advertisment -
Google search engine

Most Popular