ಮಂಡ್ಯ: ಸ್ಟೈಫಂಡ್ ಹೆಚ್ಚಳಕ್ಕೆ ಆಗ್ರಹಿಸಿ ವೈದ್ಯರು ಮಂಡ್ಯದ ಮಿಮ್ಸ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. OPD ಬಂದ್ ಮಾಡಿ ಪ್ರತಿಭಟನೆಗೆ ಕುಳಿತ ವೈದ್ಯರು..ಕರ್ನಾಟಕ ನಿವಾಸಿ ವೈದ್ಯರ ಸಂಘ (KARD) ವತಿಯಿಂದ ಪ್ರತಿಭಟನೆ ಮಾಡಲಾಯಿತು.
ನಿವಾಸಿ ವೈದ್ಯರಿಗೆ ಸ್ಟೈಪೆಂಡ್ ಪರಿಷ್ಕರಣೆಗೆ ಆಗ್ರಹಿಸಲಾಯಿತು. ಸರ್ಕಾರಿ ಕಾಲೇಜುಗಳ ವೈದ್ಯಕೀಯ ಕಾಲೇಜುಗಳ ನಿವಾಸಿ ವೈದ್ಯರು, ಸ್ನಾತಕೋತ್ತರ ಪದವೀಧರರು, ಸೂಪರ್- ಸ್ಪೆಷಾಲಿಟಿ ನಿವಾಸಿಗಳು ಮತ್ತು ಹಿರಿಯ ನಿವಾಸಿಗಳಿಂದ ಪ್ರತಿಭಟನೆ ಮಾಡಲಾಯಿತು.
ಬೇರೆ ರಾಜ್ಯಗಳಲ್ಲಿನ ವೈದ್ಯರಿಗೆ ಹೆಚ್ಚಿನ ವೇತನ ನೀಡುತ್ತಿದ್ದಾರೆ.ನಾವು ಮಾತ್ರ ಪಡೆಯುವ ವೇತನ 50% ಆಗಿದೆ. ವೈದ್ಯಕೀಯ ಕೋರ್ಸ್‌ಗಳ ಶುಲ್ಕವು ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಅತ್ಯಧಿಕವಾಗಿದೆ. ಸ್ಟೈಫಂಡ್ ಹೆಚ್ಚಳಕ್ಕೆ ವಿನಂತಿಸಿ ರಾಜ್ಯ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ, ಆದ್ದರಿಂದ ತಕ್ಷಣವೇ ರಾಜ್ಯ ಸರ್ಕಾರ ವೈದ್ಯರ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು. ನ್ಯಾಯ ಸಿಗುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.