Saturday, April 19, 2025
Google search engine

Homeಸ್ಥಳೀಯಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲ್ಲ: ಸಾರಾ ಮಹೇಶ್ ಸ್ಪಷ್ಟನೆ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲ್ಲ: ಸಾರಾ ಮಹೇಶ್ ಸ್ಪಷ್ಟನೆ

ಮೈಸೂರು: ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ೨೦೨೪ರ ಗದ್ದಲ ಮುಗಿಯುತ್ತಿದ್ದಂತೆ ಕರ್ನಾಟಕದಲ್ಲಿ ೩ ಕ್ಷೇತ್ರಗಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸದ್ದು ಮಾಡುತ್ತಿದೆ. ಅದರಲ್ಲೂ ಬಹಳ ಕುತೂಹಲ ಕೆರಳಿಸಿರುವ ಕ್ಷೇತ್ರ ಚನ್ನಪಟ್ಟಣ ಉಪಚುನಾವಣೆ. ಅದಕ್ಕೆ ಕಾರಣ ಈ ಕ್ಷೇತ್ರದ ಶಾಸಕರಾಗಿದ್ದವರು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ. ಇದೀಗ ಈ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಈ ಸಂದೇಹಕ್ಕೆ ತೆರೆ ಎಳೆದಿದ್ದಾರೆ ಮಾಜಿ ಸಚಿವ ಸಾರಾ ಮಹೇಶ್.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲು ತಯಾರಿಲ್ಲ ಎಂದು ಮಾಜಿ ಸಚಿವ ಸಾರಾ ಮಹೇಶ್ ಸ್ಪಷ್ಟ ಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ?ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಸ್ಪಷ್ಟಪಡಿಸಿದ್ದಾರೆ. , ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ, ದೇವೇಗೌಡರ ಅಭಿಪ್ರಾಯ ಕೂಡ ಇದೇ ಆಗಿದೆ ಎಂದು ಹೇಳಿದ್ದಾರೆ. ನಿಖಿಲ್ ಮೇಲೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡವಿರುವುದು ನಿಜ. ಆದರೆ ಅವರು ಯಾವ ಒತ್ತಡಕ್ಕೂ ಮಣಿಯುವ ಸ್ಥಿತಿಯಲ್ಲಿ ಇಲ್ಲ ಎಂಬುವುದಾಗಿ ಮಾಜಿ ಸಚಿವ ಸಾರಾ ಮಹೇಶ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular