Saturday, April 19, 2025
Google search engine

Homeಅಪರಾಧಕಾನೂನುವಿನೇಶ್ ಫೋಗಟ್‌ ಮೇಲ್ಮನಿಯ ತೀರ್ಪು ಆ.16ಕ್ಕೆ ಮುಂದೂಡಿಕೆ

ವಿನೇಶ್ ಫೋಗಟ್‌ ಮೇಲ್ಮನಿಯ ತೀರ್ಪು ಆ.16ಕ್ಕೆ ಮುಂದೂಡಿಕೆ

ಪ್ಯಾರಿಸ್‌: ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆ.ಜಿ. ವಿಭಾಗದಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಭಾರತೀಯ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಸಲ್ಲಿಸಿರುವ ಮೇಲ್ಮನವಿ ಮೇಲಿನ ತೀರ್ಪನ್ನು ಆ. 16ಕ್ಕೆ ಕ್ರೀಡಾ ನ್ಯಾಯ ಮಂಡಳಿಯ (ಸಿಎಎಸ್) ತಾತ್ಕಾಲಿಕ ವಿಭಾಗವು ಮುಂದೂಡಿದೆ.

ವಿನೇಶ್ ಅವರು ಪ್ಯಾರಿಸ್ ಒಲಿಂಪಿಕ್ ಕೂಟದ ಮಹಿಳೆಯರ 50 ಕೆ.ಜಿ. ಫ್ರೀಸ್ಟೈಲ್‌ ಕುಸ್ತಿ ಫೈನಲ್ ಪ್ರವೇಶಿಸಿದ್ದರು. ಬೌಟ್‌ಗೂ ಮುನ್ನ ಅವರು ದೇಹತೂಕ ಪರೀಕ್ಷೆಯಲ್ಲಿ 50 ಗ್ರಾಂ ಹೆಚ್ಚು ತೂಗಿದ್ದರು. ಇದರಿಂದಾಗಿ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿ ಸಲಾಗಿತ್ತು. ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಲಭಿಸುವ ಅವಕಾಶ ಕೈ ಜಾರಿತ್ತು.

ಇದರಿಂದಾಗಿ ವಿನೇಶ್ ಅವರು ತಾವು ಸೆಮಿಫೈನಲ್‌ ಮುಕ್ತಾಯದವರೆಗೂ ದೇಹತೂಕ ನಿರ್ವಹಣೆಯನ್ನು ಮಾಡಿದ್ದ ಕಾರಣ ಬೆಳ್ಳಿಪದಕವನ್ನು ನೀಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ಒಲಿಂಪಿಕ್ಸ್‌ನಲ್ಲಿರುವ ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿಚಾರಣೆ ನಡೆಸಿತ್ತು.

ಮನವಿಯನ್ನು ಆಲಿಸಿದ ಸಿಎಎಸ್‌ ಆರಂಭದಲ್ಲಿ ಆ.10 ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ನಂತರ ಆ.13 ರಂದು ಪ್ರಕಟಿಸಲಾಗುವುದು ಎಂದಿತ್ತು. ಆದರೆ ಈಗ ಮೂರನೇ ಬಾರಿ ಮುಂದೂಡಿದ್ದು, ಆ.16 ರಂದು ಪ್ರಕಟಿಸುವುದಾಗಿ ಹೇಳಿದೆ.

ವಿನೇಶ್‌ ಫೋಗಟ್‌ ಪರವಾಗಿ ಖ್ಯಾತ ವಕೀಲ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

RELATED ARTICLES
- Advertisment -
Google search engine

Most Popular