ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದ್ದು, ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನ್ನ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ನೀಡಿದೆ.
ಆಗಸ್ಟ್ ೨೩ರೊಳಗೆ ಪ್ರತಿಕ್ರಿಯೆ ನೀಡುವಂತೆ ಸಿಬಿಐಗೆ ಸೂಚಿಸಿದ ಸುಪ್ರೀಂ ಕೋರ್ಟ್, ಮಧ್ಯಂತರ ಜಾಮೀನು ನಿರಾಕರಿಸಿದೆ.