ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ೭೮ನೇ ಸ್ವಾತಂತ್ರೋತ್ಸವದ ಅಂಗವಾಗಿ ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕು ವ್ಯಾಪ್ತಿಯ ಶಾಲೆ ಮತ್ತು ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳಿಗೂ ಶಾಸಕ ಡಿ.ರವಿಶಂಕರ್ ಅವರ ವೈಯುಕ್ತಿಕ ವೆಚ್ಚದಲ್ಲಿ ಸಿಹಿ ವಿತರಣೆ ಮಾಡಲಾಗುತ್ತಿದೆ ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಚರ‍್ನಹಳ್ಳಿ ಶಿವಣ್ಣ ಹೇಳಿದರು.
ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿರುವ ಶಿವಾನುಭವ ಕಲ್ಯಾಣ ಮಂಟಪದಲ್ಲಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿತರಿಸಲು ಶಿಕ್ಷಕರಿಗೆ ಸಿಹಿ ತಿಂಡಿಗಳ ಬಾಕ್ಸ್ಗಳನ್ನು ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇದರ ಜತೆಗೆ ಅಂಗನವಾಡಿ ಮಕ್ಕಳಿಗೂ ಸಿಹಿ ಕೊಡಲಾಗುತ್ತದೆ ಎಂದರು.
ಎರಡು ತಾಲೂಕಿನ ಶಾಲಾ ಕಾಲೇಜು ಮತ್ತು ಅಂಗನವಾಡಿಗಳ ೪೦ ಸಾವಿರ ವಿದ್ಯಾರ್ಥಿಗಳಿಗೆ ಮತ್ತು ಮಕ್ಕಳಿಗೆ ಸಿಹಿ ವಿತರಣೆ ಮಾಡಲಾಗುತ್ತಿದ್ದು ಧ್ವಜಾರೋಹಣದ ನಂತರ ಆಯಾ ಶಾಲೆಗಳಲ್ಲಿ ಸಿಹಿ ಕೊಡಮಾಡಲಾಗುತ್ತದೆ ಎಂದರಲ್ಲದೆ ಈ ಕೆಲಸವನ್ನು ಶಿಕ್ಷಕ ಬಾಂಧವರು ಅಚ್ಚುಕಟ್ಟಾಗಿ ಮಾಡಬೇಕು ಮನವಿ ಮಾಡಿದರು.
ದೇಶಕ್ಕೆ ಸ್ವಾತಂತ್ರö್ಯ ಬಂದು ೭೮ ವರ್ಷಗಳಾಗಿರುವ ಈ ಸುಸಂದರ್ಭದಲ್ಲಿ ನಮ್ಮ ಶಾಸಕರು ವಿದ್ಯಾರ್ಥಿಗಳಿಗೆ ಸಿಹಿ ವಿತರಿಸುವ ಉತ್ತಮ ಕೆಲಸ ಮಾಡುತ್ತಿದ್ದು ಇದಕ್ಕೆ ನಾನು ಅವರನ್ನು ಅಭಿನಂದಿಸುತ್ತೇನೆ ಎಂದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ಬಿಇಒ ಆರ್.ಕೃಷ್ಣಪ್ಪ, ಸಿಡಿಪಿಒ ಸಿ.ಎಂ.ಅಣ್ಣಯ್ಯ, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ಕಾಂಗ್ರೆಸ್ ವಕ್ತಾರ ಸೈಯದ್‌ಜಾಬೀರ್ ಮಾತನಾಡಿದರು.
ಪುರಸಭೆ ಮಾಜಿ ಸದಸ್ಯ ಕೆ.ವಿನಯ್, ಶಾಸಕರ ಆಪ್ತ ಸಹಾಯಕ ಹರಂಬಳ್ಳಿನವೀನ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಸಿ.ಎನ್.ಸ್ವಾಮಿ, ಸರ್ಕಾರಿ ನೌಕರರ ಸಂಘದ ಖಜಾಂಚಿ ಡಿ.ವಿ.ಗುಡಿ ಪ್ರಸನ್ನ, ಬಿಆರ್‌ಸಿ ವೆಂಕಟೇಶ್, ಶಿಕ್ಷಕರಾದ ಸಿ.ಎನ್.ಪ್ರಭು, ಶೋಭಾಪ್ರಕಾಶ್, ಬೋಜೇಗೌಡ, ಶಿಕ್ಷಣ ಸಂಯೋಜಕ ದಾಸಪ್ಪ ಮತ್ತಿತರರು ಹಾಜರಿದ್ದರು.