Saturday, April 19, 2025
Google search engine

Homeರಾಜ್ಯಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಇದರ ಬದಲಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಗ್ಯಾರಂಟಿ ಯೋಜನೆಯಿಂದ ಸರಕಾರ ದಿವಾಳಿಯಾಗಲಿದೆ ಎಂದು ಭವಿಷ್ಯ ನುಡಿದವರಿಗೆ ಸಿಎಂ ತಿರುಗೇಟು ನೀಡಿದರು.

ಜೊತೆಗೆ ಗ್ಯಾರಂಟಿ ಯೋಜನೆ ನಿಲ್ಲಲ್ಲ ಅದರ ಬದಲು ಗೃಹಲಕ್ಷ್ಮೀ ಫಲಾನುಭವಿಗಳನ್ನು ಸ್ವಸಹಾಯ ಸಂಘಗಳಾಗಿ ಸಂಘಟಿಸಿ, ಆರ್ಥಿಕ ನೆರವು ಒದಗಿಸಲಾಗುವುದು ಎಂದರು.

ಜನ ಕಲ್ಯಾಣ ಕಾರ್ಯಗಳ ಅನುಷ್ಠಾನ ರಾಜ್ಯಗಳ ಜವಾಬ್ದಾರಿ. ಅವುಗಳಿಗೆ ಪೂರಕ ಸಂಪನ್ಮೂಲ ಒದಗಿಸುವುದು ಕೇಂದ್ರದ ಜವಾಬ್ದಾರಿ. ಆದರೆ, ಇತ್ತೀಚಿನ ವರ್ಷಗಳಲ್ಲಿ ಜವಾಬ್ದಾರಿಯಿಂದ ದೂರ ಸರಿಯುವ ಕೆಲಸ ಕೇಂದ್ರ ಮಾಡುತ್ತಿದೆ ಎಂದು ಸಿಎಂ ವಾಗ್ದಾಳಿ ನಡೆಸಿದರು.

RELATED ARTICLES
- Advertisment -
Google search engine

Most Popular