ಗುಂಡ್ಲುಪೇಟೆ: ಪಟ್ಟಣದ ಜಾಕೀರ್ ಹುಸೇನ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣವನ್ನು ಪುರಸಭಾ ಸದಸ್ಯ ಎಚ್.ಆರ್.ರಾಜಗೋಪಾಲ್ ನೆರವೇರಿಸಿದರು.
ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪುರಸಭಾ ಸದಸ್ಯ ಎಚ್.ಆರ್.ರಾಜಗೋಪಾಲ್, ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಮಂದಿ ಮಹನೀಯರು ವೀರ ಮರಣ ಹೊಂದಿದ್ದಾರೆ. ಅವರನ್ನು ಸ್ಮರಿಸಬೇಕು. ದೇಶದಲ್ಲಿ ಎಲ್ಲಾ ಧರ್ಮ, ಜಾತಿ, ಸಮುದಾಯದ ಜನರು ಶಾಂತಿ, ಸುವ್ಯವಸ್ಥೆ, ಸೌಹಾರ್ದಯುತವಾಗಿ ಜೀವನ ನಡೆಸಬೇಕು. ಇದಕ್ಕಾಗಿ ಡಾ.ಬಿ.ಆರ್.ಅಂಬೇಡ್ಕರ್ ಪ್ರಪಂಚದಲ್ಲೇ ಅತ್ಯಂತ ದೊಡ್ಡದಾದ ಸಂವಿಧಾನವನ್ನು ನೀಡಿದ್ದಾರೆ. ಆದ್ದರಿಂದ ಪ್ರತಿಯೊಬ್ಬ ಮಹಾನ್ ವ್ಯಕ್ತಿಗಳ ತತ್ವ, ಸಿದ್ದಾಂತ ಪಾಲಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಸಾಜಿದಾ ಬೇಗಂ, ಮುಖ್ಯ ಶಿಕ್ಷಕ ಮೋಹನ್ ಕುಮಾರ್, ಶಿಕ್ಷಕಿ ಶರ್ಮಿಳ, ರೇಣುಕ ಸೇರಿದಂತೆ ಶಾಲಾ ಮಕ್ಕಳು ಹಾಜರಿದ್ದರು.