Sunday, April 20, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ : ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ : ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ನಾವೂ ಕಾನೂನು ಮೂಲಕವೇ ಉತ್ತರ ಕೊಡುತ್ತೇವೆ. ಸಿಎಂ, ಪಕ್ಷ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ ನಡೆಸಲು ಮುಂದಾಗಿದ್ದು, ಸಭೆಯಲ್ಲಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭಾಗಿಯಾಗಿದ್ದಾರೆ.

RELATED ARTICLES
- Advertisment -
Google search engine

Most Popular