Saturday, April 19, 2025
Google search engine

Homeರಾಜ್ಯಸುದ್ದಿಜಾಲರಾಜ್ಯಪಾಲರ ವಿರುದ್ಧ ಕುರುಬ ಸಮುದಾಯ ಆಕ್ರೋಶ: ಮೈಸೂರಿನಲ್ಲಿ ಮಾನವ ಸರಪಳಿ ಪ್ರತಿಭಟನೆ

ರಾಜ್ಯಪಾಲರ ವಿರುದ್ಧ ಕುರುಬ ಸಮುದಾಯ ಆಕ್ರೋಶ: ಮೈಸೂರಿನಲ್ಲಿ ಮಾನವ ಸರಪಳಿ ಪ್ರತಿಭಟನೆ

ಮೈಸೂರು: ಮುಡಾದಿಂದ ಅಕ್ರಮವಾಗಿ ೧೪ ಸೈಟ್ ಪಡೆದುಕೊಂಡ ಆರೋಪದ ಮೇಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಟಿಜೆ ಅಬ್ರಾಹಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಕುಮಾರ್ ಎಂಬ ಮೂವರು ದೂರಿನ ಹಿನ್ನೆಲೆ ಮುಖ್ಯಮಂತ್ರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಈಗ ರಾಜ್ಯಪಾಲರ ವಿರುದ್ಧ ಅಲ್ಲಲ್ಲಿ ಪ್ರತಿಭಟನೆ ಆರಂಭವಾಗಿದೆ.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಅನುಮತಿ ಕೊಟ್ಟಿದ್ದಕ್ಕೆ ರಾಜ್ಯಪಾಲರ ವಿರುದ್ಧ ಕುರುಬ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಮಧ್ಯಾಹ್ನ ಗಾಂಧಿನಗರದಲ್ಲಿ ಪ್ರತಿಭಟನೆಗೆ ನಿರ್ಧಾರ ತೆಗೆದುಕೊಂಡಿದೆ. ಕುರುಬರ ಸಂಘದ ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ.

ಸಿಎಂ ತವರು ಮೈಸೂರಿನಲ್ಲಿ ಕೂಡ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟ್ ಹಾಗೂ ಕೈಗೊಂಬೆ ಎಂದು ಘೋಷಣೆ ಕೂಗಲಾಗುತ್ತಿದೆ. ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ ಶಿವರಾಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಮೈಸೂರಿನ ನ್ಯಾಯಾಲಯದ ಮುಂಭಾಗ ಸೇರಿರುವ ಪ್ರತಿಭಟನಾಕಾರರು ಮೋದಿ ಸೇವಕರಂತೆ ರಾಜ್ಯಪಾಲರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದಾಗ ಪಟ್ಟುಬಿಡದೆ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಸ್ಥಳದಲ್ಲಿ ಮಾನವ ಸರಪಳಿ ರಚನೆ ಮಾಡಿ ಅಂಗಿ ಬಿಚ್ಚಿ ಅರೆಬೆತ್ತಲೆಯಾಗಿ ಪ್ರತಿಭಟನೆ ಮಾಡುತ್ತಿದ್ದಾರೆ.

RELATED ARTICLES
- Advertisment -
Google search engine

Most Popular