Sunday, April 20, 2025
Google search engine

Homeಸ್ಥಳೀಯವೈದ್ಯೆ ಮೇಲೆ ಅತ್ಯಾಚಾರ ಹತ್ಯೆ ಖಂಡಿಸಿ: ಜೆಎಸ್‌ಎಸ್ ಆಸ್ಪತ್ರೆಯಲ್ಲಿ ವೈದ್ಯರ ಪ್ರತಿಭಟನೆ

ವೈದ್ಯೆ ಮೇಲೆ ಅತ್ಯಾಚಾರ ಹತ್ಯೆ ಖಂಡಿಸಿ: ಜೆಎಸ್‌ಎಸ್ ಆಸ್ಪತ್ರೆಯಲ್ಲಿ ವೈದ್ಯರ ಪ್ರತಿಭಟನೆ

ಮೈಸೂರು: ಕರ್ತವ್ಯದಲ್ಲಿರುವಾಗಲೇ ಕೊಲ್ಕತ್ತಾದ ಆರ್.ಜಿ.ಕೆಎಆರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪ್ರಕರಣದ ವಿರುದ್ಧ ಜೆಎಸ್‌ಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿಗಳು ಮತ್ತು ವೈದ್ಯರುಗಳು ಒಂದು ದಿನ ಹೊರರೋಗಿ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡಿಸಿ, ಅತ್ಯಾಚಾರಿಗಳಿಗೆ ಕಾನೂನುಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜೆಎಸ್‌ಎಸ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆಚ್. ಬಸವನಗೌಡಪ್ಪ, ಜೆಎಸ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಸಿ.ಪಿ. ಮಧು, ಕಾಲೇಜಿನ ಉಪಪ್ರಾಂಶುಪಾಲರಾದ ಡಾ.ಮಾಂತಪ್ಪ ಮತ್ತು ಜೆಎಸ್‌ಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿಗಳು ಹಾಗೂ ವೈದ್ಯರುಗಳು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular