Saturday, April 19, 2025
Google search engine

Homeರಾಜ್ಯಬಿಜೆಪಿಯವರಿಗೆ ಸಿಎಂ ಸಿದ್ದರಾಮಯ್ಯರವರ ಒಂದು ಕೂಲದನ್ನೂ ಅಲ್ಲಾಡಿಸಲು ಸಾಧ್ಯವಿಲ್ಲ : ಎಚ್.ಸಿ ಬಾಲಕೃಷ್ಣ ಆಕ್ರೋಶ

ಬಿಜೆಪಿಯವರಿಗೆ ಸಿಎಂ ಸಿದ್ದರಾಮಯ್ಯರವರ ಒಂದು ಕೂಲದನ್ನೂ ಅಲ್ಲಾಡಿಸಲು ಸಾಧ್ಯವಿಲ್ಲ : ಎಚ್.ಸಿ ಬಾಲಕೃಷ್ಣ ಆಕ್ರೋಶ

ರಾಮನಗರ : ಬಿಜೆಪಿಯಿಂದ ಸಿಎಂ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ. ರಾಜ್ಯಪಾಲರು ಈ ಮಟ್ಟಕ್ಕೆ ಇಳಿಯುತ್ತಾರೆ ಅಂತ ಅಂದುಕೊಂಡಿರಲಿಲ್ಲ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ ಬಾಲಕೃಷ್ಣ ಆಕ್ರೋಶ ಹೊರಹಾಕಿದರು.

ಇಂದು ಮಾಗಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಂಡ ಏಕೈಕ ಅತ್ಯುತ್ತಮ ನಾಯಕ ಸಿದ್ದರಾಮಯ್ಯ. ಅಧಿಕಾರ ಇದ್ದ ಸಂದರ್ಭದಲ್ಲಿ ಕುಟುಂಬದವರನ್ನ ಅಕ್ಕಪಕ್ಕ ಸೇರಿಸದೇ ಆಡಳಿತ ಮಾಡಿದ್ದಾರೆ. ಬಿಜೆಪಿ ಅವರು ದ್ವೇಷದ ರಾಜಕೀಯ ಮಾಡ್ತಿದ್ದಾರೆ ಎಂದು ಕಮಲ ನಾಯಕರ ವಿರುದ್ಧ ಶಾಸಕ ಹೆಚ್.ಸಿ.ಬಾಲಕೃಷ್ಣ ಹರಿಹಾಯ್ದಿದ್ದಾರೆ.

ಸಿದ್ದರಾಮಯ್ಯ ಕಾಲದಲ್ಲಿ ಆಗದೇ ಇರೋ ವಿಚಾರವನ್ನ ಅವರ ಹಣೆಗೆ ಕಟ್ಟುವ ಕೆಲಸ ಆಗ್ತಿದೆ. ಬಿಜೆಪಿಯವ್ರಿಗೆ ಸಿದ್ದರಾಮಯ್ಯನ ಜನಪ್ರಿಯತೆ ಸಹಿಸಲು ಆಗ್ತಿಲ್ಲ. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ರು ನಮ್ಮ ತಟ್ಟೆಯ ನೊಣದ ಬಗ್ಗೆ ಮಾತನಾಡುತ್ತಾರೆ. ಬಹುಶಃ ಇದರಿಂದ ಬಿಜೆಪಿಯವರಿಗೆ ಯಾವುದೇ ಅನುಕೂಲ ಆಗಲ್ಲ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular