ಕೆಆರ್‌ಪೇಟೆ : ‘ಪ್ರಜಾಪ್ರಭುತ್ವ ಕಗ್ಗೊಲೆ ಮಾಡುವ ನಡೆಯನ್ನು ರಾಜ್ಯಪಾಲರು ಅನುಸರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ’ ಎಂದು ಆರೋಪಿಸಿ ಕೆಆರ್‌ಪೇಟೆ ತಾಲೂಕು ಕಾಂಗ್ರೆಸ್, ಕುರುಬ ಸಂಘ ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಕೆಆರ್‌ಪೇಟೆಯ ಟಿ.ಬಿ.ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.
ಮಾನವ ಸರಪಳಿ ನಿರ್ಮಿಸಿ ಕೈ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡಿದರು. ರಾಜ್ಯಪಾಲರು ಹಾಗೂ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಗೋ ಬ್ಯಾಕ್ ರಾಜ್ಯಪಾಲ ಎಂದು ಘೋಷಣೆ ಕೂಗಿ ಕಿಡಿ ಕಾಡಿದರು. ರಾಜ್ಯಪಾಲ ಥಾವರ್ ಚಂದ್ ಗೋಹ್ಲೇಟ್ ರ ಪ್ರತಿಕೃತಿ ಗೆ ಡಿಸೇಲ್ ಸುರಿದು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು .
ರಾಜ್ಯಪಾಲರು ಬಿಜೆಪಿ ಏಜೆಂಟ್ ರೀತಿ ನಡೆದುಕೊಂಡಿದ್ದಾರೆ. ಕೂಡಲೇ ಅವರನ್ನ ರಾಷ್ಟ್ರಪತಿಗಳು ವಜಾ ಮಾಡಬೇಕು ಎಂದು ಆಗ್ರಹಿಸಿದರು . ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದರು.