ಮಂಡ್ಯ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಯುತ್ತಿದ್ದು ,ಬೃಹತ್ ಪ್ರತಿಭಟನೆಗೆ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಳ್ಳುತ್ತಿದ್ದಾರೆ.
ರಾಜ್ಯಪಾಲರ ವಿರುದ್ಧ ದಿಕ್ಕಾರ ಕೂಗುತ್ತಾ ಪೋಸ್ಟರ್ ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. 12 ಗಂಟೆ ವೇಳೆ ಸ್ಥಳಕ್ಕೆ ಆಗಮಿಸಿ ಸಚಿವ ಚೆಲುವರಾಯಸ್ವಾಮಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ ಸಚಿವರಿಗೆ ಜಿಲ್ಲೆಯ ಶಾಸಕರು ಸಾಥ್ ನೀಡಲಿದ್ದಾರೆ.
ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.