ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದ ಮೊಘರಹಳ್ಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಮಂಟಿ ಗ್ರಾಮದ ಅನಿಲ್ (28) ಮೃತ ಯುವಕ.
ಮೊಘರಹಳ್ಳಿ ಗ್ರಾಮದ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಇಂದು ಬೆಳಿಗ್ಗೆ ನೇತಾಡುತ್ತಿದ್ದ ಶವ ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.