Saturday, April 19, 2025
Google search engine

Homeರಾಜ್ಯಕೆಲ ಬಿಜೆಪಿ ನಾಯಕರೂ ನಮ್ಮ ಹೋರಾಟದಲ್ಲಿ ಕೈಜೋಡಿಸಿದ್ದಾರೆ: ಸಂತೋಷ್ ಲಾಡ್

ಕೆಲ ಬಿಜೆಪಿ ನಾಯಕರೂ ನಮ್ಮ ಹೋರಾಟದಲ್ಲಿ ಕೈಜೋಡಿಸಿದ್ದಾರೆ: ಸಂತೋಷ್ ಲಾಡ್

ಹುಬ್ಬಳ್ಳಿ: ಅಹಿಂದ ವರ್ಗಗಳ ಅಗ್ರಗಣ್ಯ ನಾಯಕರಾಗಿರುವ ಸಿದ್ದರಾಮಯ್ಯನವರ ಜನಪ್ರಿಯತೆಯನ್ನು ಸಹಿಸಲಾಗಿದ ಬಿಜೆಪಿ ನಾಯಕರು ಅವರ ವಿರುದ್ಧ ಪಿತೂರಿ ನಡೆಸಿದ್ದಾರೆ ಮತ್ತು ರಾಜಕೀಯ ಷಡ್ಯಂತ್ರ ಹೂಡಿದ್ದಾರೆ, ಇದನ್ನು ಕಾಂಗ್ರೆಸ್ ಪಕ್ಷ ರಾಜಕೀಯವಾಗೇ ಎದುರಿಸಲಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕಳೆದ ೪೦ ವರ್ಷಗಳಿಂದ ರಾಜಕೀಯದಲ್ಲಿರುವ ಸಿದ್ದರಾಮಯ್ಯ ಶೋಷಿತ ವರ್ಗದವರ ನಾಯಕರಾಗಿ ಕಳಂಕರಹಿತ ರಾಜಕೀಯ ಬದುಕು ನಡೆಸಿದ್ದಾರೆ. ಅವರನ್ನು ಪದಚ್ಯುತಗೊಳಿಸಲು ರಾಜ್ಯದ ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ಬಳಸಿಕೊಂಡು ಹುನ್ನಾರ ನಡೆಸಿದೆ. ಅದರೆ ರಾಜ್ಯದ ಜನತೆ, ಶಾಸಕರು ಮತ್ತು ಕೆಲ ಬಿಜೆಪಿ ನಾಯಕರು ಸಹ ಸಿದ್ದರಾಮಯ್ಯ ಅವರೊಂದಿಗಿದ್ದಾರೆ ಎಂದು ಲಾಡ್ ಹೇಳಿದರು.

ಮುಖ್ಯಮಂತ್ರಿಯವರು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಲ್ಲ, ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ಹೋರಾಟ ನಡೆಸಲಿದ್ದಾರೆ ಎಂದು ಸಚಿವ ಹೇಳಿದರು.

RELATED ARTICLES
- Advertisment -
Google search engine

Most Popular