Saturday, April 19, 2025
Google search engine

Homeಅಪರಾಧನಕಲಿ ಎನ್‌ಸಿಸಿ ಶಿಬಿರದಲ್ಲಿ 13 ಬಾಲಕಿಯರಿಗೆ ಲೈಂಗಿಕ ಕಿರುಕುಳ: 11 ಮಂದಿ ಬಂಧನ

ನಕಲಿ ಎನ್‌ಸಿಸಿ ಶಿಬಿರದಲ್ಲಿ 13 ಬಾಲಕಿಯರಿಗೆ ಲೈಂಗಿಕ ಕಿರುಕುಳ: 11 ಮಂದಿ ಬಂಧನ

ಚೆನ್ನೈ: ನಕಲಿ ಎನ್‌ಸಿಸಿ ಶಿಬಿರದಲ್ಲಿ ೧೩ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ವಿಚಾರ ಬೆಳಕಿಗೆ ಬಂದಿದ್ದು, ಘಟನೆಗೆ ಸಮಬಂಧಿಸಿದಂತೆ ೧೧ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿಯಲ್ಲಿ ಈ ಘಟನೆ ನಡೆದಿದೆ. ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು, ಶಿಬಿರದ ಆಯೋಜಕರು, ಶಾಲೆಯ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಮತ್ತು ಓರ್ವ ವರದಿಗಾರ ಸೇರಿದಂತೆ ೧೧ ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಖಾಸಗಿ ಶಾಲೆಯಲ್ಲಿ ಯಾವುದೇ ಎಸ್‌ಸಿಸಿ ಘಟಕವಿಲ್ಲ ಎಂಬುವುದಾಗಿ ತಿಳಿದುಬಂದಿದೆ.

ತಿಂಗಳ ಆರಂಭದಲ್ಲಿ ನಡೆದ ಮೂರು ದಿನಗಳ ಶಿಬಿರದಲ್ಲಿ ೧೭ ಬಾಲಕಿಯರು ಸೇರಿದಂತೆ ೪೧ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಲ್ಲಿ ಕೆಲವು ವಿದ್ಯಾರ್ಥಿನಿಯರಿಗೆ ಆಮಿಷವೊಡ್ಡಿ ಸಭಾಂಗಣದಿಂದ ಹೊರಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬುವುದಾಗಿ ಬಾಲಕಿಯರು ಆರೋಪಿಸಿದ್ದಾರೆ.

RELATED ARTICLES
- Advertisment -
Google search engine

Most Popular