ಉಡುಪಿ: ಮೂಡ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಪಾಸಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು ಸೋಮವಾರ ಪ್ರತಿಭಟನೆ ನಡೆಸಿವೆ.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಉಡುಪಿಯ ಪ್ರಮುಖ ರಸ್ತೆಗಳಲ್ಲಿ ನಡೆದ ಪಾದಯಾತ್ರೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು. ಕಾಂಗ್ರೆಸ್ ಪಾದಯಾತ್ರೆಯು ಹುತಾತ್ಮ ವೇದಿಕೆ ತಲುಪಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಈ ಪ್ರತಿಭಟನೆ, ಪಾದಯಾತ್ರೆಯು ನಡೆಯುತ್ತಿದೆ. ಇನ್ನು ಕಾಂಗ್ರೆಸ್ ಕಾರ್ಯಕರ್ತರ ಜೊತೆ ಪ್ರತಿಭಟನೆಯಲ್ಲಿ ಸಾರ್ವಜನಿಕರು ಭಾಗಿಯಾಗಿದ್ದಾರೆ.