Saturday, April 19, 2025
Google search engine

Homeರಾಜ್ಯಇನ್ನೂ ಎರಡು ದಿನ ರಾಜ್ಯದಲ್ಲಿ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಇನ್ನೂ ಎರಡು ದಿನ ರಾಜ್ಯದಲ್ಲಿ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರೆಯುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಂಡ್ಯ, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರದಲ್ಲಿ ಮುಂದಿನ ೨ ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ ೪೦-೫೦ ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಆ.೨೨ರಿಂದ ಆ.೨೪ರ ವರೆಗೆ ಮಳೆ ಇರುವುದಿಲ್ಲ. ೨೫ರಿಂದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ : ರಾಜಧಾನಿ ಬೆಂಗಳೂರಿನ ಸುರಿಯುತ್ತಿರುವ ಮಳೆ ಇನ್ನೂ ಐದು ದಿನಗಳ ಕಾಲ ಮುಂದುವರೆಯಲಿದ್ದು, ಇಂದಿನಿಂದ ಎರಡು ದಿನಗಳ ಕಾಲ ಭಾರಿ ಪ್ರಮಾಣದಲ್ಲಿ ಮಳೆ ಬರುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

RELATED ARTICLES
- Advertisment -
Google search engine

Most Popular