Monday, April 21, 2025
Google search engine

Homeಅಪರಾಧಕಾನೂನುಗಣಿ ಗುತ್ತಿಗೆ ಆರೋಪ : ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಗವರ್ನರ್‌ಗೆ ಎಸ್‌ಐಟಿ ಪತ್ರ

ಗಣಿ ಗುತ್ತಿಗೆ ಆರೋಪ : ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಗವರ್ನರ್‌ಗೆ ಎಸ್‌ಐಟಿ ಪತ್ರ

ಬೆಂಗಳೂರು : ನಿಯಮ ಉಲ್ಲಂಘನೆ ಮಾಡಿ ಗಣಿ ಗುತ್ತಿಗೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್‌ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದೆ.

ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿರುವ ಆರೋಪದಡಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್‌ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದೆ.

ಹೆಚ್.ಡಿ ಕುಮಾರಸ್ವಾಮಿ ಅವರು ೨೦೦೭ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಎಸ್‌ಎಸ್‌ವಿಎಂ ಕಂಪನಿಗೆ ೫೫೦ ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ. ೨೦೧೧ರಲ್ಲಿ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿ ಉಲ್ಲೇಖ ಆಧರಿಸಿ ಎಸ್?ಐಟಿ ತನಿಖೆ ನಡೆಸುತ್ತಿದೆ.

ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನ್ಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್ ಐಟಿ ೨೦೨೩ ನಂಬರ್ ೨೧ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪ್ರಸ್ತಾವನೆ ಸಲ್ಲಿಸಿತ್ತು.

ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಕುರಿತಂತೆ ನಿನ್ನೆ ಹೈ ಕೋರ್ಟ್ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಆಗಸ್ಟ್ ೨೯ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ.

RELATED ARTICLES
- Advertisment -
Google search engine

Most Popular