Sunday, April 20, 2025
Google search engine

Homeರಾಜ್ಯನೀಟ್, ಸಿಇಟಿ ಸೀಟು ಹಂಚಿಕೆ ಫಲಿತಾಂಶ ಸೆ. 1ಕ್ಕೆ

ನೀಟ್, ಸಿಇಟಿ ಸೀಟು ಹಂಚಿಕೆ ಫಲಿತಾಂಶ ಸೆ. 1ಕ್ಕೆ

ಬೆಂಗಳೂರು: ಮೊದಲ ಸುತ್ತಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಆಪ್ಷನ್‌ಗಳನ್ನು (ಆಯ್ಕೆ/ಇಚ್ಛೆ) ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್ ಸೈಟ್‌ನಲ್ಲಿ ಪೋರ್ಟಲ್ ತೆರೆದಿದೆ.
ಆ.೨೨ರಂದು ಬೆಳಿಗ್ಗೆ ೧೦ರವರೆಗೆ ತಮಗೆ ಇಚ್ಛೆ ಇರುವ ಕಾಲೇಜು ಮತ್ತು ಕೋರ್ಸ್‌ಗಳನ್ನು ಅಭ್ಯರ್ಥಿಗಳು ಆಯ್ಕೆ ಮಾಡಿಕೊಳ್ಳಬಹುದು. ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್ ಆಪ್ ಸಂದೇಶ ರವಾನಿಸುವ ವ್ಯವಸ್ಥೆ ಆರಂಭಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಎಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೂ ಆಪ್ಷನ್‌ಗಳನ್ನು ದಾಖಲಿಸಲು ಅವಕಾಶ ಇರಲಿದೆ ಎಂದು ಅವರು ವಿವರಿಸಿದ್ದಾರೆ. ಆಗಸ್ಟ್ ೨೫ರ ರಾತ್ರಿ ೮ಕ್ಕೆ ಎರಡನೇ ಅಣಕು ಸೀಟು ಹಂಚಿಕೆಯ ಫಲಿತಾಂಶ (ಯುಜಿ ಸಿಇಟಿ/ನೀಟ್) ಪ್ರಕಟಿಸಲಾಗುವುದು. ೨೭ರಂದು ಬೆಳಿಗ್ಗೆ ೧೧ರವರೆಗೆ ಇಚ್ಛೆಗಳನ್ನು ಬದಲಿಸಿಕೊಳ್ಳಬಹುದು. ಸೆ. ೧ರಂದು ಸಂಜೆ ೬ಕ್ಕೆ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ವೆಬ್ ಸೈಟ್‌ನಲ್ಲಿ ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಪರಿಶೀಲಿಸಿ ಆಪ್ಷನ್‌ಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಬೇಕು. ಅಲ್ಲದೆ, ಕಾಲೇಜು ಶುಲ್ಕದ ಮಾಹಿತಿ ಕೂಡ ನೀಡಲಾಗಿದ್ದು, ಅದನ್ನೂ ಗಮನಿಸಿಯೇ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳುವಂತೆ ಅವರು ಸಲಹೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular