ಬೆಂಗಳೂರು: ಮುಡಾ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಕೆಯಾಗಿರುವ ದೂರುಗಳ ವಿಚಾರಣೆಯನ್ನು ಹೈಕೋರ್ಟ್ ಸೂಚನೆ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬರುವ ಸೆ.೨ಕ್ಕೆ ಮುಂದೂಡಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಮೇರೆಗೆ ವಿಚಾರಣೆಗೆ ಅಂಗೀಕರಿಸುವ ಕುರಿತು ಮಂಗಳವಾರ ಆದೇಶ ಕಾಯ್ದಿರಿಸಲಾಗಿತ್ತು. ಆದರೆ, ಹೈಕೋರ್ಟ್ ಇದೇ ತಿಂಗಳು ೨೯ರವರೆಗೆ ಪ್ರಕರಣಕ್ಕೆ ತಡೆ ನೀಡಿರುವ ಕಾರಣ, ಸೆ.೨ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.
ಸಿದ್ದರಾಮಯ್ಯ ವಿರುದ್ಧ ಆಭಿಯೋಜನೆಗೆ ಅನುಮತಿ ನೀಡಿರುವ ಆದೇಶ ಮತ್ತು ಹೈಕೋರ್ಟ್‌ನ ಸೂಚನೆಯ ಆದೇಶವನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಯಿತು. ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅಂಗೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ವಾದ ಆಲಿಸಿದ ನ್ಯಾಯಾಲಯ ಮಂಗಳವಾರ ಆದೇಶ ನೀಡಲು ಕಾಯ್ದಿರಿಸಿತ್ತು. ಇದೀಗ ಹೈಕೋರ್ಟ್ ಸೂಚನೆ ಮೇರೆಗೆ ಮುಂದೂಡಿಕೆ ಮಾಡಲಾಗಿದೆ.