Saturday, April 19, 2025
Google search engine

Homeರಾಜ್ಯಅಗತ್ಯ ಬಿದ್ದರೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅರೆಸ್ಟ್ : ಸಿಎಂ ಸಿದ್ದರಾಮಯ್ಯ

ಅಗತ್ಯ ಬಿದ್ದರೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅರೆಸ್ಟ್ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಂಧಿಸುವ ಸನ್ನಿವೇಶ ಬಂದರೆ ಯಾವುದೇ ಮುಲಾಜಿಲ್ಲದೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ‌ ಮೊದಲು ಇಲ್ಲಿಗೆ ಸಮೀಪದ ಗಿಣಿಗೇರಿಯಲ್ಲಿರುವ ಎರ್ ಸ್ಕ್ರಿಪ್ಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಾರೆ ಎಂದು ಕುಮಾರಸ್ವಾಮಿ ಭಯ ಬಿದ್ದಿದ್ದಾರೆ. ಪ್ರಾಸಿಕ್ಯೂಷನ್ ಗೆ ನಾವು ಕೇಳಿಲ್ಲ. ಖಾಸಗಿಯವರೂ ಸಹ ಕೇಳಿಲ್ಲ. ಎಸ್ ಐಟಿ ಹಾಗೂ ಲೋಕಾಯುಕ್ತ ತನಿಖೆ ಮಾಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದಾರೆ. ಸಾಕ್ಷ್ಯ ಸಂಗ್ರಹ ಮಾಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದಾರೆ.

ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಬಗ್ಗೆ ಈಗಲೇ ಏನನ್ನೂ ಹೇಳಲಾಗುವುದಿಲ್ಲ. ಆದರೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

RELATED ARTICLES
- Advertisment -
Google search engine

Most Popular